Breaking News

ಏನೇ ಮಾಡಿದರೂ ನೇರವಾಗಿ ಮಾಡುತ್ತೇನೆ; ಸ್ಪೀಕರ್ ಭೇಟಿ ಅವಶ್ಯಕತೆಯಿಲ್ಲ; ಆನಂದ್ ಸಿಂಗ್

Spread the love

ಕಾರವಾರ: ಖಾತೆ ಹಂಚಿಕೆ ವಿಚಾರದಲ್ಲಿ ತೀವ್ರ ಅಸಮಾಧಾನಗೊಂಡಿರುವ ಸಚಿವ ಆನಂದ್ ಸಿಂಗ್ ರಾಜೀನಾಮೆ ಕೊಡುವ ವಿಚಾರ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸಿದೆ.

ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆನಂದ್ ಸಿಂಗ್, ತಮ್ಮ ಮುಂದಿನ ನಡೆ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ನಾನು ಮಾತಿನ ಮೇಲೆ ನಿಲ್ಲುವ ವ್ಯಕ್ತಿ. ಕೆಲವರ ಟೀಕೆಗಳಿಗೆ ಪ್ರತಿಕ್ರಿಯಿಸಲು ಇಚ್ಛಿಸಲ್ಲ. ನನ್ನ ಆತ್ಮಸಾಕ್ಷಿಗೆ ನಾನು ಉತ್ತರ ಕೊಡಬೇಕಾಗಿದೆ ಎಂದು ಹೇಳಿದರು.

ಇಂದು ಸ್ಪೀಕರ್ ಕಾಗೇರಿ ಭೇಟಿಯಾಗುವ ಸುದ್ದಿ ಬಗ್ಗೆ ಕೇಳಿದ ಪ್ರಶ್ನೆಗೆ ಸ್ಪೀಕರ್ ಭೇಟಿಯಾಗುವ ಅವಶ್ಯಕತೆ ಇಲ್ಲ. ನಾನು ಏನೇ ಮಾಡಿದರೂ ನೇರವಾಗಿ ಮಾತನಾಡುತ್ತೇನೆ. ಕದ್ದು ಮುಚ್ಚಿ ಮಾತನಾಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.

ಕೇಳಿದ ಖಾತೆ ಕೊಟ್ಟಿಲ್ಲ ಎಂಬ ಕಾರಣಕ್ಕೆ ಅಸಮಾಧಾನಗೊಂದಿರುವ ಆನಂದ್ ಸಿಂಗ್, ಆಗಸ್ಟ್ 15ರ ಒಳಗೆ ಬೇರೆ ಖಾತೆ ಕೊಡಬೇಕು ಇಲ್ಲವಾದಲ್ಲಿ ತಮ್ಮ ಮುಂದಿನ ರಾಜಕೀಯ ನಡೆ ನಿರ್ಧರಿಸುವುದಾಗಿ ಹೇಳಿದ್ದರು. ಆದರೆ ಸಚಿವರ ಖಾತೆ ಬದಲಾವಣೆ ಬಗ್ಗೆ ಸಿಎಂ ಯಾವುದೇ ಸುಳಿವು ನೀಡುತ್ತಿಲ್ಲ ಎನ್ನಲಾಗಿದೆ. ಹೀಗಾಗಿ ಆನಂದ್ ಸಿಂಗ್ ನಡೆ ಕುತೂಹಲಕ್ಕೆ ಕಾರಣವಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ