Breaking News

ಉಲ್ಟಾ ಮಚ್ಚೆ ಹೇಳಿಕೆ ನಿಜವಾಗಲಿ; ಸಿ.ಟಿ. ರವಿ ಶೀಘ್ರ ಸಂಪುಟ ಸಚಿವರಾಗಲಿ; ಸಿದ್ದರಾಮಯ್ಯ ತಿರುಗೇಟು

Spread the love

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಏನು ಹೇಳುತ್ತಾರೆ ಅದು ಉಲ್ಟಾ ಆಗುತ್ತೆ, ಅವರ ನಾಲಿಗೆಯಲ್ಲಿ ಉಲ್ಟಾ ಮಚ್ಚೆ ಇದೆ ಎಂದು ವಾಗ್ದಾಳಿ ನಡೆಸಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಸಿ.ಟಿ. ರವಿ ಶೀಘ್ರ ಸಂಪುಟ ಸಚಿವರಾಗಲಿ ಎಂದಿದ್ದಾರೆ.

ಸಿ.ಟಿ. ರವಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಸಿ.ಟಿ. ರವಿ ಶೀಘ್ರ ಸಚಿವರಾಗಲಿ ಎಂದು ಹಾರೈಸುತ್ತೇನೆ. ಆ ಮೂಲಕ ನನ್ನ ನಾಲಿಗೆ ಮೇಲೆ ಉಲ್ಟಾ ಮಚ್ಚೆ ಇದೆ ಎಂಬ ಅವರ ನಂಬಿಕೆ ನಿಜವಾಗಲಿ ಎಂದು ವ್ಯಂಗ್ಯವಾಡಿದ್ದಾರೆ.

 

ಇತ್ತೀಚೆಗಷ್ಟೇ ಸಿ.ಟಿ. ರವಿ, ಸಿದ್ದರಾಮಯ್ಯ ಏನು ಹೇಳುತ್ತಾರೋ ಅದು ಉಲ್ಟಾ ಆಗುತ್ತೆ. ಬಿಜೆಪಿ ಉಳಿಯಲ್ಲ ಮತ್ತೆ ಅಧಿಕಾರಕ್ಕೆ ಬರಲ್ಲ ಎಂದಿದ್ದರು. ಆದರೆ ಈಗ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಮೋದಿ ಎರಡನೇ ಅವಧಿಗೆ ಪ್ರಧಾನಿಯಾಗಲ್ಲ ಅಂದರು ಅದು ಕೂಡ ಉಲ್ಟಾ ಆಗಿದೆ. 2018ರಲ್ಲಿ ತಾನು ಮತ್ತೆ ಸಿಎಂ ಆಗಿ ಅಧಿಕಾರಕ್ಕೆ ಬರುತ್ತೇನೆ ಎಂದಿದ್ದರು ಆದರೆ ಅದು ಸಾಧ್ಯವಾಗಿಲ್ಲ ಹಾಗಾಗಿ ಸಿದ್ದರಾಮಯ್ಯ ಅವರು ಹೇಳುವುದೆಲ್ಲ ಉಲ್ಟಾ ಆಗುತ್ತೆ ಅವರ ಬಾಯಲ್ಲಿ ಉಲ್ಟಾ ಮಚ್ಚೆ ಇದೆ ಎಂದಿದ್ದರು.

ಇದೀಗ ಸಿ.ಟಿ. ರವಿ ಹೇಳಿಕೆಗೆ ಲೇವಡಿ ಮಾಡಿರುವ ಸಿದ್ದರಾಮಯ್ಯ ಶೀಘ್ರ ಸಚಿವರಾಗಲಿ ಎಂದು ಹೇಳುವ ಮೂಲಕ ಸಿ.ಟಿ. ರವಿ ಸಚಿವರಾಗಲ್ಲ ಎಂಬುದನ್ನು ಪರೋಕ್ಷವಾಗಿ ಅರ್ಥೈಸಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ