ಕೊಪ್ಪಳ: ತುಂಗಭದ್ರಾ ಜಲಾಶಯವು ಭರ್ತಿಯಾದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಶುಭ ಘಳಿಗೆಯಲ್ಲಿ ಬೃಹತ್ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಗಂಗಾಮಾತೆಗೆ ಬಾಗಿನ ಅರ್ಪಿಸಿದರು.
ಡ್ಯಾಂ ಜಲಾಶಯದ ತಟದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿ, ತುಂಗಭದ್ರಾ ಎಲ್ಲೆಡೆಯೂ ಮಳೆ ಚೆನ್ನಾಗಿ ಆಗುತ್ತಿವೆ. ಹಾಗಾಗಿ ತುಂಗಭದ್ರಾ ಜಲಾಶಯದ ಇತಿಹಾಸದಲ್ಲಿ ಅವಧಿ ಮೊದಲೇ ತುಂಬಿದೆ. ಇದರಿಂದ ಲಕ್ಷಾಂತರ ರೈತರು ಖುಷಿಯಲ್ಲಿದ್ದಾರೆ. ಹಾಗಾಗಿ ಎಲ್ಲ ಜಲಾಶಯಗಳಿಗೆ ಬಾಗಿನ ಅರ್ಪಿಸಲಾಗುತ್ತಿದೆ ಎಂದರು.
ಆಲಮಟ್ಟಿ ಜಲಾಶಯಕ್ಕೆ ಇದೇ ಆ.21 ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಬಾಗಿನ ಅರ್ಪಿಸಲು ಬರಲಿದ್ದಾರೆ. ನೀರಾವರಿ ವಿಚಾರದಲ್ಲಿ ಸರ್ಕಾರ ಹೆಚ್ಚು ಕಾಳಜಿ ವಹಿಸಿದೆ ಎಂದರು.
ಸಚಿವ ಆನಂದ್ ಸಿಂಗ್ ಅವರು ಬಾಗಿನ ಅರ್ಪಣೆ ವೇಳೆ ಗೈರು ವಿಚಾರಕ್ಕೆ ಪ್ರತಿಕ್ರಿಯಿಸಿ, ಭಾರತೀಯ ಸಂಸ್ಕೃತಿಯಲ್ಲಿ ಗಂಗಾಮಾತೆಗೆ ಬಾಗಿನ ಅರ್ಪಣೆ ಮಾಡುವುದು ನಮ್ಮ ಸಂಸ್ಕೃತಿ. ನಾವು ಸಂಸ್ಕೃತಿ, ಸಂಸ್ಕಾರ ಪಾಲಿಸಬೇಕು. ಆದರೆ ಅವರು ಬಾಗಿನ ಕಾರ್ಯಕ್ರಮಕ್ಕೆ ಬರುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ ಎನ್ನುವ ಮೂಲಕ ಸಚಿವ ಆನಂದ್ ಸಿಂಗ್ ಅವರಿಗೆ ಭಾರತೀಯ ಸಂಸ್ಕೃತಿ ಗೊತ್ತಿಲ್ಲ ಎಂದು ಪರೋಕ್ಷವಾಗಿ ಏಟು ನೀಡಿದರು.