Breaking News

ಉಣಕಲ್ ಕೆರೆಗೆ ಚನ್ನಬಸವ ಸಾಗರವೆಂದು ನಾಮಕರಣಕ್ಕೆ ಹೈಕೋರ್ಟ್ ಆದೇಶ

Spread the love

ಧಾರವಾಡ: ಹುಬ್ಬಳ್ಳಿಯ ಐತಿಹಾಸಿಕ ಉಣಕಲ್ ಕೆರೆಗೆ ಚನ್ನಬಸವ ಸಾಗರವೆಂದು ನಾಮಕರಣ ಮಾಡಬೇಕು ಎಂದು ಮಹಾನಗರ ಪಾಲಿಕೆಗೆ ಹೈಕೋರ್ಟ್ ಆದೇಶ ನೀಡಿದೆ .

2003 ರ ಜನವರಿ 16 ರಂದು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಈ ಕುರಿತು ನಿರ್ಣಯ ಅಂಗೀಕರಿಸಿದ್ದರೂ ನಿರ್ಣಯ ಜಾರಿಗೆ ಕ್ರಮ ಕೈಗೊಳ್ಳದ ಪಾಲಿಕೆ ವಿರುದ್ಧ ಹಲವರು ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ಧಾರವಾಡ ಹೈಕೋರ್ಟ್ ಪೀಠ ಈ ಆದೇಶ ನೀಡಿದೆ.

ಹುಬ್ಬಳ್ಳಿ- ಧಾರವಾಡ ಮಧ್ಯದ ಪ್ರಮುಖ ಆಕರ್ಷಣೆಯಾಗಿರುವ ಮತ್ತು ಶತಮಾನಗಳ ಇತಿಹಾಸ ಹೊಂದಿರುವ ಉಣಕಲ್ ಕೆರೆ ಹಾಗೂ ಆವರಣವನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿ ಪಡಿಸಲಾಗಿದೆ. ಕೆರೆ ದಂಡೆಯ ಮೇಲಿರುವ ಶ್ರೀ ಚನ್ನಬಸವೇಶ್ವರ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಾರೆ. ಪ್ರತಿ ವರ್ಷ ಭರತ ಹುಣ್ಣಿಮೆಯಂದು ಜಾತ್ರೆ, ರಥೋತ್ಸವ ನಡೆಯುತ್ತದೆ,. ಶ್ರಾವಣ ಮಾಸದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ , ಭಕ್ತಿಯಿಂದ ನಡೆಯುತ್ತವೆ. 12 ನೇ ಶತಮಾನದಲ್ಲಿ ಕಲ್ಯಾಣ ಕ್ರಾಂತಿ ನಡೆದ ನಂತರ ಶ್ರೀ ಚನ್ನಬಸವೇಶ್ವರರ ನೇತೃತ್ವದ ಶರಣರ ತಂಡ ಸಹ್ಯಾದ್ರಿಯ ಅರಣ್ಯ ಪ್ರದೇಶದ ಮಧ್ಯದ ಉಳವಿಯತ್ತ ಸಾಗಿತು. ಈ ಮಧ್ಯೆ ಅವರು ಉಣಕಲ್ ಕೆರೆ ದಂಡೆ ಮೇಲೆ ಕೆಲಕಾಲ ಉಳಿದು ಜನರಲ್ಲಿ ಜಾಗೃತಿ ಮೂಡಿಸಿದರು. ಈ ಹಿನ್ನೆಲೆಯಲ್ಲಿ ಉಣಕಲ್ ಕೆರೆ ದಂಡೆಯ ಮೇಲೆ ರೂಪಗೊಂಡಿರುವ ದೇವಸ್ಥಾನ ಬಸವ ಭಕ್ತರ ಪವಿತ್ರ ಯಾತ್ರಾ ಸ್ಥಳವಾಗಿದೆ.

 

ಈ ಎಲ್ಲ ಕಾರಣಗಳಿಂದ ಚನ್ನಬಸವ ಸಾಗರ ಎಂದು ನಾಮಕರಣ ಮಾಡಲು ಹಿಂದೆ ನಿರ್ಣಯ ಕೈಗೊಳ್ಳಲಾಗಿತ್ತು. ಹುಬ್ಬಳ್ಳಿಯ ಶಂಕರಗೌಡ ಪಾಟೀಲ್, ವಿನಯ್ ಪರಮಾದಿ, ಶಿವಪ್ಪ ಪಟ್ಟಣಶೆಟ್ಟಿ ಅವರು ಸೇರಿ 7 ಜನರು ನ್ಯಾಯಾಲಯದ ಮೊರೆ ಹೋಗಿ ವಾದ ಮಂಡಿಸಿದ್ದರು, ಆದರೆ ನಿರ್ಣಯ ಜಾರಿಯಾಗದ ಹಿನ್ನೆಲೆಯಲ್ಲಿ ಇವರ ಪರವಾಗಿ ವಕೀಲ ಕೆ.ಎಸ್ , ಕೋರಿಶೆಟ್ಟರ್ ವಾದ ಮಂಡಿಸಿದ್ದರು


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ