Breaking News

ಮಾಡದ ತಪ್ಪಿಗೆ ಸೌದಿ ಜೈಲಿನಲ್ಲಿದ್ದ ಕನ್ನಡಿಗ ಕೊನೆಗೂ ಬಂಧಮುಕ್ತ…!

Spread the love

ತಾನು ಮಾಡದ ತಪ್ಪಿಗೆ ಸೌದಿಯಲ್ಲಿ ಬಂಧನಕ್ಕೊಳಗಾಗಿದ್ದ ಕನ್ನಡಿಗ ಹರೀಶ್​ ಬಂಗೇರ 2 ವರ್ಷಗಳ ಬಳಿಕ ತಾಯ್ನಾಡಿಗೆ ಮರಳಿದ್ದಾರೆ. ಸೌದಿ ದೊರೆ ಮತ್ತು ಧರ್ಮ ನಿಂದನೆ ಆರೋಪದ ಅಡಿಯಲ್ಲಿ ಹರೀಶ್​ ಬಂಗೇರರನ್ನು ಬಂಧಿಸಲಾಗಿತ್ತು.

ಹರೀಶ್​ ಬಂಗೇರ ಹೆಸರಲ್ಲಿ ನಕಲಿ ಫೇಸ್​ಬುಕ್​ ಖಾತೆ ತೆರೆದಿದ್ದ ಮೂಡಬಿದಿರೆ ಮೂಲಕ ಮುಸ್ಲಿಂ ಸಹೋದರರು ಸೌದಿ ದೊರೆ ವಿರುದ್ಧ ಅವಹೇಳನಕಾರಿ ಪೋಸ್ಟ್​ ಮಾಡಿದ್ದರು. ಉಡುಪಿ ಸೆಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾದ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ.

ಪ್ರಕರಣ ಸಂಬಂಧ ಸೌದಿ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ ಕೇಂದ್ರ ಸಚಿವಾಲಯ 2 ವರ್ಷಗಳ ಬಳಿಕ ಸೌದಿ ಜೈಲಿನಿಂದ ಹರೀಶ್​ರನ್ನು ಬಂಧಮುಕ್ತಗೊಳಿಸುವಲ್ಲಿ ಯಶಸ್ವಿಯಾಗಿದೆ. ಸೌದಿ ಜೈಲಿನಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಹರೀಶ್​ ಬಂಗೇರರನ್ನು ಕುಟುಂಬಸ್ಥರು ಸ್ವಾಗತಿಸಿದ್ದಾರೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ