ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇಬ್ಬರು ಆಂಕರ್ ಗಳಿಗೆ ಹಾಗೂ ಇಬ್ಬರು ಕ್ಯಾಮರಾಮನ್ ಗಳಿಗೆ ಸೋಂಕು ತಗುಲಿದೆ.
ರಾಜ್ಯಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಬ್ಬರು ಮಹಿಳಾ ಆಂಕರ್ ಗಳಿಗೆ ಮತ್ತು ಇಬ್ಬರು ಕ್ಯಾಮರಾ ಮನ್ ಗಳಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.
ಅವರನ್ನು ನಿಗದಿತ ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರನ್ನು ಗುರುತಿಸಿ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ ಎಂದು ಹೇಳಲಾಗಿದೆ.
ಸೋಂಕಿನ ಮೂಲ ಪತ್ತೆಗೆ ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದು, ಅವರ ಟ್ರಾವೆಲ್ ಹಿಸ್ಟರಿ ಪಡೆದುಕೊಂಡಿದ್ದಾರೆ.
Laxmi News 24×7