Breaking News

ED ದಾಳಿ ಕೇಸ್; ಶಾಸಕ ಜಮೀರ್ ವಿರುದ್ಧ ಮಹತ್ವ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು

Spread the love

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ನಡೆಸಿದ ದಾಳಿ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಶ್ರೀಲಂಕಾ ಕ್ಯಾಸಿನೋ ನಂಟು ಹಾಗೂ ಐಎಂಎ ವ್ಯವಹಾರದ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ.

ಜಮೀರ್ ಅಹ್ಮದ್ ತನ್ನ ಶಿಷ್ಯ ಶೇಖ್ ಫಾಸಿಲ್ ಜೊತೆ ಶ್ರೀಲಂಕಾದಲ್ಲಿ ಕ್ಯಾಸಿನೋ ವ್ಯವಹಾರ ನಡೆಸಿದ್ದರು ಎನ್ನಲಾಗಿದೆ. ಇಬ್ಬರೂ ಪಾರ್ಟನರ್ ಶಿಪ್ ವ್ಯವಹಾರದಲ್ಲಿ ಹೂಡಿಕೆ ಮಾಡಿದ್ದಾರೆ ಎಂಬ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕಿದ್ದಾರೆ.

 

ಇನ್ನು ಐಎಂಎ ವ್ಯವಹಾರದ ಬಗ್ಗೆ ಇಡಿ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದು, ಸೈಟ್ ಖರೀದಿಸಿ ಮೂಲ ಬೆಲೆಗಿಂತ ಅಧಿಕ ಹಣ ಪಡೆದು ಮಾರಾಟ ಮಾಡುತ್ತಿದ್ದ ಬಗ್ಗೆಯೂ ಸಾಕ್ಷಿ ಲಭ್ಯವಾಗಿವೆ ಎನ್ನಲಾಗಿದೆ. ಪ್ರಮುಖವಾಗಿ ಶೇಖ್ ಫಾಸಿಲ್ ಜೊತೆಗಿನ ವ್ಯವಹಾರಗಳ ಬಗ್ಗೆ ಇಡಿ ಮಹತ್ವದ ಮಾಹಿತಿ ಕಲೆ ಹಾಕಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ