ಉಡುಪಿ: ಆಗಸ್ಟ್ 15ರ ಸ್ವಾತಂತ್ರ್ಯೋತ್ಸವಕ್ಕೆ ಕೇಂದ್ರದಿಂದ ಕಟ್ಟುನಿಟ್ಟಿನ ಆದೇಶ ಬಂದಿದೆ. ಕೊರೊನಾ ನಡುವೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಉಡುಪಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ದಿನದಂದು ಕಮಾಂಡರ್ಸ್ ಇರುತ್ತಾರೆ. ಆದರೆ ಪರೇಡ್ ಇರುವುದಿಲ್ಲ. ತಂಡ ತಂಡಗಳು ಬಂದು ಸೆಲ್ಯೂಟ್ ಮಾಡ ಇರುವುದಿಲ್ಲ. ಕೇಂದ್ರದ ನಿಯಮಾವಳಿ ಪ್ರಕಾರ ಹಬ್ಬ ಆಚರಣೆ ನಡೆಸಬೇಕು. ಎಲ್ಲರೆದುರಲ್ಲೇ ಧ್ವಜಾರೋಹಣ ಮಾಡಲಾಗುತ್ತದೆ. ಆದರೆ ಮೈದಾನಗಳಿಗೆ ಸಾರ್ವಜನಿಕರಿಗೆ ಪ್ರವೇಶ ಇಲ್ಲ ಎಂದರು.
ಸ್ವಾತಂತ್ರ್ಯೋತ್ಸವ ವೀಕ್ಷಣೆಗೆ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗುತ್ತದೆ. ಆಯಾಯ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಮಳೆ ಕೂಡ ಇರುವುದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸುವುದು ಕಷ್ಟ. ರಾಷ್ಟ್ರೀಯ ಆಚರಣೆಗೆ ಯಾವುದೇ ಕೊರತೆಯಾಗದಂತೆ ಗೌರವದ ಸ್ವಾತಂತ್ರ್ಯೋತ್ಸವ ನಡೆಸಲಾಗುವುದು ಎಂದು ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.