Breaking News

ಮಕ್ಕಳ ಮೇಲೆ ಲಸಿಕೆ ಪ್ರಯೋಗಕ್ಕೆ ಜಾನ್ಸ್‌ನ್ ಅಂಡ್ ಜಾನ್ಸ್‌ನ್ ನಿಂದ ಮನವಿ

Spread the love

ನವದೆಹಲಿ,ಆ.20- ಕೊರೊನಾ ವಿರುದ್ಧ ಹೋರಾಟದ ಭ್ರಹ್ಮಾಸ್ತ್ರವಾಗಿರುವ ಲಸಿಕೆ ಅವಿಷ್ಕಾರಗಳು ದಿನೇ ದಿನೇ ಪ್ರಗತಿ ಸ್ವರೂಪದಲ್ಲಿದ್ದು, ಹೊಸದಾಗಿ ಜಾನ್ಸನ್ ಅಂಡ್ ಜಾನ್ಸ್‍ನ್ ಸಂಸ್ಥೆ 12 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಅಧ್ಯಯನ ನಡೆಸಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದೆ. ಕೇಂದ್ರ ಸರ್ಕಾರದ ಔಷಧಿ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್‍ಸಿಒ)ಗೆ ಅರ್ಜಿ ಸಲ್ಲಿಸಿದ್ದು, ಪ್ರಾಯೋಗಿಗ ಪರೀಕ್ಷೆಗೆ ಅನುಮತಿ ನೀಡುವಂತೆ ಮನವಿ ಸಲ್ಲಿಸಿದೆ. ಕೇಂದ್ರ ಸರ್ಕಾರ ಅನುಮತಿ ನೀಡಿದ್ದಾದರೆ ಜಾನ್ಸನ್ ಅಂಡ್ ಜಾನ್ಸನ್ ಮಕ್ಕಳಿಗೆ ಲಸಿಕೆ ಪ್ರಯೋಗ ಮಾಡುವ ಮೂರನೇ ಸಂಸ್ಥೆಯಾಗಲಿದೆ.

ಈಗಾಗಲೇ ಹೈದರಾಬಾದ್ ಮೂಲಕ ಭಾರತ್ ಬಯೋಟೆಕ್ ಸಂಸ್ಥೆ ಕೋವ್ಯಾಕ್ಸಿನ್ ಮತ್ತು ಜೈಡೊಸ್‍ಕ್ಯಾಡಿಲಾ ಸಂಸ್ಥೆಯ ಜೈಕೌ-ಡಿ ಲಸಿಕೆಗಳು ಮಕ್ಕಳ ಮೇಲೆ ಪ್ರಯೋಗಾರ್ಥ ಪರೀಕ್ಷೆಗಳು ನಡೆಯುತ್ತಿವೆ. ಜೈಕೌ-ಡಿ ದೇಶಾದ್ಯಂತ 520 ಮಕ್ಕಳ ಮೇಲೆ ಎರಡನೆ ಮತ್ತು ಮುರನೆ ಹಂತದ ಪ್ರಯೋಗಾರ್ಥ ಪರೀಕ್ಷೆ ನಡೆಯುತ್ತಿದೆ. 12ರಿಂದ 18 ವರ್ಷದ ಸುಮಾರು ಒಂದು ಸಾವಿರ ಮಕ್ಕಳ ಮೇಲೆ ಪ್ರಯೋಗ ಪರೀಕ್ಷೆಗಳು ನಡೆಯುತ್ತಿದ್ದು, ಶೀಘ್ರವೇ ಫಲಿತಾಂಶ ಕುರಿತ ವರದಿ ಸರ್ಕಾರದ ಕೈ ಸೇರುವ ನಿರೀಕ್ಷೆ ಇದೆ.

ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ವೇಳೆಗೆ ಮಕ್ಕಳಿಗೆ ಲಸಿಕೆ ಲಭ್ಯವಾಗಬಹುದು ಎಂದು ರಾಷ್ಟ್ರೀಯ ವೈರಾಣು ಸಂಸ್ಥೆಯ ನಿರ್ದೇಶಕರಾದ ಪ್ರಿಯಾ ಅಬ್ರಹಾಂ ಹೇಳಿದ್ದಾರೆ. ಈಗಾಗಲೇ ಕೆಲವು ದೇಶಗಳಲ್ಲಿ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ಭಾರತ ಸುರಕ್ಷತೆಗೆ ಆದ್ಯತೆ ನೀಡಿ ಹಂತ ಹಂತವಾಗಿ ಎಚ್ಚರಿಕೆಯ ಕ್ರಮಗಳನ್ನು ಅನುಸರಿಸುತ್ತಿದೆ. ಅಮೆರಿಕ ಮೂಲದ ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆ ಮಕ್ಕಳ ಮೇಲೆ ಪ್ರಯೋಗಕ್ಕೆ ಅನುಮತಿ ಕೇಳಿರುವ ಲಸಿಕೆ ತಯಾರಿಸುವ ಮೂರನೆ ಸಂಸ್ಥೆಯಾಗಲಿದೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ