ತುಮಕೂರು: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ವರಮಹಾಲಕ್ಷ್ಮಿ ದರ್ಶನ ಪಡೆಯಬೇಕು ಎಂದುಕೊಂಡಿದ್ದ ಭಕ್ತರಿಗೆ ಜಿಲ್ಲಾಡಳಿತ ನಿರಾಸೆ ಮೂಡಿಸಿದ್ದು, ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಭಕ್ತರಿಗೆ ಅವಕಾಶ ನೀಡದೆ ದೇವಾಲಯ ಬಂದ್ ಮಾಡಿದೆ.
ಇಂದಿನಿಂದ ನಾಲ್ಕು ದಿನಗಳ ಕಾಲ ದೇವಾಲಯ ಪ್ರವೇಶಕ್ಕೆ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದ್ದು, ಜಿಲ್ಲಾಡಳಿತ ಸೂಚನೆ ಹಿನ್ನೆಲೆಯಲ್ಲಿ ದೇವಾಲಯ ಬಂದ್ ಮಾಡಿ ಆಡಳಿತ ಮಂಡಳಿ ಅಧಿಕೃತ ಆದೇಶ ಹೊರಡಿಸಿದೆ.
ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ದೇವಾಲಯದ ಅರ್ಚಕರಿಂದ ಬೆಳಗ್ಗೆ ಸಾಂಪ್ರದಾಯಿಕ ಪೂಜೆ ನಡೆಯಲಿದ್ದು, ಭಕ್ತರಿಗೆ, ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಗೊರವನಹಳ್ಳಿ ಮಹಾಲಕ್ಷ್ಮೀ ದರ್ಶನ ನಿಷೇಧ ಮಾಡಿದ್ದಾರೆ. ಪ್ರತಿವರ್ಷ ಹಬ್ಬದಂದು ಸಾವಿರಾರು ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ರು. ಈ ಬಾರಿಯೂ ಹಲವರು ವರಮಹಾಲಕ್ಷ್ಮೀ ಹಬ್ಬವಾದ ಪ್ರಯುಕ್ತ ದೇವಿಯ ದರ್ಶನಕ್ಕಾಗಿ ಕಾದ ಭಕ್ತರಿಗೆ ನಿರಾಸೆ ಎದುರಾಗಿದೆ.
Laxmi News 24×7