Breaking News

ಬೆಂಗಳೂರು: 18 ಕುಖ್ಯಾತ ರೌಡಿಗಳ ಸ್ಥಳಾಂತರ

Spread the love

ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ 18 ರೌಡಿಗಳನ್ನು ರಾಜ್ಯದ ವಿವಿಧ ಜಿಲ್ಲಾಕೇಂದ್ರಗಳ ಕಾರಾಗೃಹಗಳಿಗೆ ಸ್ಥಳಾಂತರಿಸಲಾಗಿದೆ. ವಿಲ್ಸನ್ ಗಾರ್ಡನ್ ನಾಗರಾಜ್, ಶಿವ, ಜಾರ್ಜ್ ಮೈಕಲ್, ಪ್ರದೀಪ್, ಬಾಂಬೆ ಸಲೀಂ ಸೇರಿ ಒಟ್ಟು18 ಜನ ರೌಡಿಗಳನ್ನು ಸ್ಥಳಾಂತರಿಸಲಾಗಿದೆ.

ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದ ರೌಡಿಗಳು, ಜೈಲಿನಲ್ಲಿದ್ದುಕೊಂಡೆ ತಮ್ಮ ಸಹಚರರ ಮೂಲಕ ನಗರದಲ್ಲಿ ರೌಡಿ ಚಟುವಟಿಕೆಗಳನ್ನು ನಡೆಸುವ ಸಂಚು ರೂಪಿಸುವ ಯತ್ನ ಮಾಡುತ್ತಿದ್ದರು.

ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ 18 ರೌಡಿಗಳನ್ನು ಜಿಲ್ಲಾಕೇಂದ್ರ ಗಳ ಕಾರಾಗೃಹಗಳಿಗೆ ಸ್ಥಳಾಂತರಿಸಲು ಕಾರಾಗೃಹ ಇಲಾಖೆಯ ನಿರ್ದೇಶಕರಿಗೆ ಶಿಫಾರಸ್ಸು ಮಾಡಿದ್ದರು.

ಇದೀಗ ಅವರ ಅನುಮತಿ ಪಡೆದು 18 ಜನ ರೌಡಿಗಳನ್ನು ಕಲಬುರಗಿ, ಬೆಳಗಾವಿ, ಧಾರವಾಡ, ಶಿವಮೊಗ್ಗ, ಮೈಸೂರು, ವಿಜಯಪುರ, ಬಳ್ಳಾರಿ ಜೈಲುಗಳಿಗೆ ಸ್ಥಳಾಂತರ ಮಾಡಲಾಗಿದೆ.


Spread the love

About Laxminews 24x7

Check Also

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Spread the loveಬೆಂಗಳೂರು: ಸಿಲಿಂಡರ್ ದರ ಹೆಚ್ಚಳಕ್ಕೆ  ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ