Breaking News
Home / ರಾಜ್ಯ / ಗಣಿಗಾರಿಕೆಯನ್ನು ಮುಂದಿನ ಮೂರು ತಿಂಗಳಲ್ಲಿ ಆರಂಭ : ಪ್ರಮೋದ್ ಸಾವಂತ್

ಗಣಿಗಾರಿಕೆಯನ್ನು ಮುಂದಿನ ಮೂರು ತಿಂಗಳಲ್ಲಿ ಆರಂಭ : ಪ್ರಮೋದ್ ಸಾವಂತ್

Spread the love

ಪಣಜಿ : ರಾಜ್ಯದಲ್ಲಿ ಗಣಿಗಾರಿಕೆಯನ್ನು ಮುಂದಿನ ಮೂರು ತಿಂಗಳಲ್ಲಿ ಗೋವಾ ಸರ್ಕಾರಿ ಖನಿಜ ಅಭಿವೃದ್ಧಿ ನಿಗಮದ ಅಡಿಯಲ್ಲಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭರವಸೆ ನೀಡಿದ್ದಾರೆ.

 

ಇಂದು(ಶುಕ್ರವಾರ, ಆಗಸ್ಟ್ 20) ದಕ್ಷಿಣ ಗೋವಾದ ಧಾರಬಾಂದೋರಾದಲ್ಲಿ ನಡೆದ ಸಭೆಯೊಂದರಲ್ಲಿ ಮಾತನಾಡಿದ ಸಾವಂತ್, ಹೊಸದಾಗಿ ರಚನೆಯಾದ ಗೋವಾ ಖನಿಜ ಅಭಿವೃದ್ಧಿ ನಿಗಮದ ಅಡಿಯಲ್ಲಿ ಮುಂದಿನ ಮೂರು ತಿಂಗಳಲ್ಲಿ ಈಗಾಗಲೇ ಹರಾಜು ಮಾಡಿದ ಕಬ್ಬಿಣದ ಅದಿರು ಸಾಗಾಟದಂತಹ ಚಟುವಟಿಕೆಯನ್ನು ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಗಣಿಗಾರಿಕೆ ಸ್ಥಗಿತಗೊಂಡಿದ್ದರಿಂದ ರಾಜ್ಯದಲ್ಲಿ ಅದಿರು ವ್ಯವಹಾರ ಉದ್ಯೋಗದಲ್ಲಿ ತೊಡಗಿಕೊಂಡವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನನಗೆ ಸಂಪೂರ್ಣ ಅರಿವಿದೆ. ನಾನು ಕೂಡ ಗಣಿಗಾರಿಕೆ ನಡೆಯುವ ಪರಿಸರದಲ್ಲಿಯೇ ವಾಸಿಸುತ್ತಿದ್ದೇನೆ. ರಾಜ್ಯದಲ್ಲಿ ಗಣಿಗಾರಿಕೆ ಪುನರಾರಂಭಿಸಲು ಸರ್ಕಾರ ಹೆಚ್ಚಿನ ಪ್ರಯತ್ನ ನಡೆಸುತ್ತಿದೆ. ಆದರೆ ಈ ಪ್ರಕರಣ ಸುಪ್ರಿಂ ಕೋರ್ಟನಲ್ಲಿದೆ ಎಂದಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ