Breaking News
Home / ರಾಜಕೀಯ / ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ; ಎಲ್ಲೆಲ್ಲಿ ಎಷ್ಟೆಷ್ಟು ?

ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ; ಎಲ್ಲೆಲ್ಲಿ ಎಷ್ಟೆಷ್ಟು ?

Spread the love

Petrol Diesel Price Today: ಕಳೆದ 3 ದಿನಗಳಲ್ಲಿ ಲೀಟರ್ ಡೀಸೆಲ್ ದರದಲ್ಲಿ 60 ಪೈಸೆ ಇಳಿಕೆ ಕಂಡು ಬಂದಿದ್ದು, ಇಂದು ಸ್ಥಿರವಾಗಿದೆ. ಆದೆ ಪೆಟ್ರೋಲ್ ದರ ಸತತವಾಗಿ 34 ದಿನಗಳಿಂದಲೂ ಸ್ಥಿರತೆಯಲ್ಲಿಯೇ ಇದೆ. ಜುಲೈ 18 ರಿಂದ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ.

Petrol Diesel Rate Today | ದೆಹಲಿ: ಸತತ 3 ದಿನಗಳಿಂದ ಡೀಸೆಲ್ ಬೆಲೆ ಇಳಿಕೆ ಕಂಡಿತ್ತು. ಆದರೆ ಇಂದು (ಆಗಸ್ಟ್ 21, ಶನಿವಾರ) ಪೆಟ್ರೋಲ್ ಮತ್ತು ಡೀಸೆಲ್ ದರ (Diesel Rate) ಮತ್ತೆ ಸ್ಥಿರತೆಯತ್ತ ಮುಖ ಮಾಡಿದೆ. ಪೆಟ್ರೋಲ್ ದರ (Petrol Rate) ಜುಲೈ 18 ರಂದು ಬದಲಾವಣೆ ಕಂಡಿತ್ತು. ಆ ನಂತರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ.

ಕಳೆದ 3 ದಿನಗಳಲ್ಲಿ ಲೀಟರ್ ಡೀಸೆಲ್ ದರದಲ್ಲಿ 60 ಪೈಸೆ ಇಳಿಕೆ ಕಂಡು ಬಂದಿದ್ದು, ಇಂದು ಸ್ಥಿರವಾಗಿದೆ. ಆದೆ ಪೆಟ್ರೋಲ್ ದರ ಸತತವಾಗಿ 34 ದಿನಗಳಿಂದಲೂ ಸ್ಥಿರತೆಯಲ್ಲಿಯೇ ಇದೆ. ಜುಲೈ 18 ರಿಂದ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 101.84 ರೂಪಾಯಿ ಇದೆ ಮತ್ತು ಡೀಸೆಲ್ ಪ್ರತಿ ಲೀಟರ್​ಗೆ 89.27 ರೂಪಾಯಿಯಾಗಿದೆ.

ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 107.83 ರೂಪಾಯಿ ಇದ್ದರೆ, ಲೀಟರ್ ಡೀಸೆಲ್ ಬೆಲೆ 96.84 ರೂಪಾಯಿ ನಿಗದಿಯಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 101.49 ರೂಪಾಯಿ ಇದೆ. ಲೀಟರ್ ಡೀಸೆಲ್ ಬೆಲೆ 93.84 ರೂಪಾಯಿಯಾಗಿದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 102.25 ರೂಪಾಯಿ ಇದ್ದರೆ, ಲೀಟರ್ ಡೀಸೆಲ್ ಬೆಲೆ 92.32 ರೂಪಾಯಿಗೆ ನಿಗದಿಯಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 105.25 ರೂಪಾಯಿ ಇದೆ. ಲೀಟರ್ ಡೀಸೆಲ್ ಬೆಲೆ 94.65 ರೂಪಾಯಿಯಾಗಿದೆ.

ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ಬೆಲೆ 110.20 ರೂಪಾಯಿ ಇದೆ. ಲೀಟರ್ ಡೀಸೆಲ್ ಬೆಲೆ 98.05 ರೂಪಾಯಿಯಾಗಿದೆ. ರಾಂಚಿಯಲ್ಲಿ ಲೀಟರ್ ಪೆಟ್ರೋಲ್ ಅನ್ನು 96.68 ರೂಪಾಯಿ ಕೊಟ್ಟು ಗ್ರಾಹಕರು ಕೊಳ್ಳುತ್ತಿದ್ದರೆ, ಲೀಟರ್ ಡೀಸೆಲ್ ಬೆಲೆ 94.22 ರೂಪಾಯಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ಬೆಲೆ 98.92 ರೂಪಾಯಿ ಇದೆ. ಲೀಟರ್ ಡೀಸೆಲ್ ಬೆಲೆ 89.61 ರೂಪಾಯಿಯಾಗಿದೆ. ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.25 ರೂಪಾಯಿ ಇದೆ. ಲೀಟರ್ ಡೀಸೆಲ್ ಬೆಲೆ 95.01 ರೂಪಾಯಿಗೆ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

 


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ