Breaking News
Home / ರಾಜಕೀಯ / ಏರಿಕೆಯತ್ತ ಮುಖ ಮಾಡಿದ ಚಿನ್ನದ ದರ, ಬೆಳ್ಳಿ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿ ದರ ವಿವರ ಪರಿಶೀಲಿಸಿ

ಏರಿಕೆಯತ್ತ ಮುಖ ಮಾಡಿದ ಚಿನ್ನದ ದರ, ಬೆಳ್ಳಿ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿ ದರ ವಿವರ ಪರಿಶೀಲಿಸಿ

Spread the love

Gold Silver Rate Today, 21st August: ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,250 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,42,500 ರೂಪಾಯಿಗೆ ಏರಿದೆ. ದೈನಂದಿನ ದರ ಏರಿಕೆಯಲ್ಲಿ 1,500 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

Gold Silver Rate Today |ಬೆಂಗಳೂರು: ಚಿನ್ನದ ದರ ನಿನ್ನೆ ಇಳಿಕೆಯತ್ತ ಮುಖ ಮಾಡಿತ್ತು. ಆದರೆ ಇಂದು (ಆಗಸ್ಟ್ 21, ಶನಿವಾರ) ಚಿನ್ನದ ದರ (Gold Price) ಏರಿಕೆ ಕಂಡಿದೆ. ಇದು ಆಭರಣ ಪ್ರಿಯರಿಗೆ ಕೊಂಚ ಬೇಸರ ತಂದಿರುವ ವಿಚಾರ. ಆದರೆ ಇಂದು ಬೆಳ್ಳಿ ದರ (Silver Price) ಇಳಿಕೆ ಕಂಡಿದೆ. ಕೈಯಲ್ಲಿ ಹಣವಿದ್ದಾಗ ಚಿನ್ನ ಖರೀದಿಸಿಟ್ಟು ಕೊಳ್ಳೋಣ ಎಂದು ಯೋಚಿಸುವುದು ಸಹಜ. ಕಷ್ಟ ಕಾಲದಲ್ಲಿ ನೆರವಾಗುವ ಚಿನ್ನಕ್ಕೆ ಭಾರೀ ಬೇಡಿಕೆಯಂತೂ ಇದೆ. ಹಾಗಿರುವಾಗ ಆಭರಣದ ಬೆಲೆ ಎಷ್ಟಿದೆ ಎಂಬ ಕುತೂಹಲ ಇದ್ದೇ ಇರುತ್ತದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,250 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,42,500 ರೂಪಾಯಿಗೆ ಏರಿದೆ. ದೈನಂದಿನ ದರ ಏರಿಕೆಯಲ್ಲಿ 1,500 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,280 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,82,800 ರೂಪಾಯಿಗೆ ಏರಿದೆ. ಸುಮಾರು 1,800 ರೂಪಾಯಿಯಷ್ಟು ಹೆಚ್ಚಳವಾಗಿದೆ. ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಆಗಿದ್ದು, ಕೆಜಿ ಬೆಳ್ಳಿ ಬೆಲೆಯಲ್ಲಿ 300 ರೂಪಾಯಿ ಇಳಿಕೆ ಬಳಿಕ 62,200 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನ 44,650 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,46,500 ರೂಪಾಯಿಗೆ ಏರಿಕೆಯಾಗಿದೆ. ಸುಮಾರು 1,600 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,710 ರೂಪಾಯಿಗೆ ಏರಿದೆ. 100 ಗ್ರಾಂ ಚಿನ್ನದ ದರ 4,87,100 ರೂಪಾಯಿಗೆ ಏರಿಕೆಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,700 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಕಂಡು ಬಂದಿದ್ದು, 400 ರೂಪಾಯಿ ಇಳಿಕೆ ಬಳಿಕ ಕೆಜಿ ಬೆಳ್ಳಿ ಬೆಲೆ 67,000 ರೂಪಾಯಿಗೆ ಇಳಿಕೆಯಾಗಿದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 50, 620 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,06,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,500 ರೂಪಾಯಿ ಏರಿಕೆ ಕಂಡಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,620 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 5,06,200 ರೂಪಾಯಿಗೆ ಏರಿಕೆಯಾಗಿದೆ. ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. ಕೆಜಿ ಬೆಳ್ಳಿಗೆ 62,200 ರೂಪಾಯಿ ನಿಗದಿಯಾಗಿದೆ. ಸುಮಾರು 300 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ