Breaking News

70 ಕೊರೊನಾ ಸೋಂಕಿತರ ಯಶಸ್ವಿ ಹೆರಿಗೆ ಮಾಡಲಾಗಿದೆ:ಬಿಮ್ಸ್ ನಿರ್ದೇಶಕ ಡಾ.ವಿನಯ್ ದಾಸ್ತಿಕೊಪ್ಪ

Spread the love

ಬೆಳಗಾವಿ-ಬೆಳಗಾವಿಯ ಭೀಮ್ಸ್ ಆಸ್ಪತ್ರೆಯಲ್ಲಿ, ಈವರೆಗೂ 70 ಕೊರೊನಾ ಸೋಂಕಿತರ ಯಶಸ್ವಿ ಹೆರಿಗೆ ಮಾಡಲಾಗಿದೆ ಎಂದು ಬಿಮ್ಸ್ ನಿರ್ದೇಶಕ ಡಾ.ವಿನಯ್ ದಾಸ್ತಿಕೊಪ್ಪ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಬಿಮ್ಸ್ ಆಸ್ಪತ್ರೆಯಲ್ಲಿ ಈವರೆಗೂ 70 ಸೋಂಕಿತ ಗರ್ಭಿಣಿಯರಿಗೆ ಹೆರಿಗೆ ಮಾಡಲಾಗಿದೆ. ಈ ಪೈಕಿ 34 ಸೀಜರಿನ್ ಹಾಗೂ 36 ನಾರ್ಮಲ್ ಡಿಲಿವರಿ ಆಗಿವೆ,ಎಂದು ದಾಸ್ತಿಕೊಪ್ಪ ಮಾಹಿತಿ ನೀಡಿದ್ದಾರೆ.

ಹೆರಿಗೆಯಾದ 5 ಅಥವಾ 7ನೇ ದಿವಸಕ್ಕೆ ನವಜಾತ ಶಿಶುವಿನ ಸ್ವ್ಯಾಬ್ ಟೆಸ್ಟ್ ಮಾಡಲಾಗಿದೆ. ಎಲ್ಲರೂ ಆರೋಗ್ಯವಾಗಿದ್ದು ಕೆಲವರು ಡಿಸ್ಚಾರ್ಜ್ ಸಹ ಆಗಿದ್ದಾರೆ.

9 ಕೊರೊನಾ ಸೋಂಕಿತರ ಡಯಾಲಿಸಿಸ್ ಸಹ ಮಾಡಲಾಗುತ್ತಿದೆ, ಹೆರಿಗೆ ಸಮಯದಲ್ಲಿ ವೈರಾಣುಗೆ ಡೈರೆಕ್ಟ್ ಎಕ್ಸ್‌ಪೋಸ್ ಆಗುತ್ತಾರೆ. ಮುಂಜಾಗ್ರತೆ ವಹಿಸಿ‌ 70 ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ ಮಾಡಲಾಗಿದ್ದು, ಬಿಮ್ಸ್ ಸಿಬ್ಬಂದಿ ಕಾರ್ಯಕ್ಕೆ ಡಾ.ವಿನಯ್ ದಾಸ್ತಿಕೊಪ್ಪ ಮೆಚ್ಚುಗೆ ವ್ಯೆಕ್ತ ಪಡಿಸಿದ್ದಾರೆ.


Spread the love

About Laxminews 24x7

Check Also

ಎಲ್ಲ ಜಾತಿ, ಜನಾಂಗ ಒಟ್ಟುಗೂಡಿಸಿಕೊಂಡು ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ

Spread the love ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲ ಜಾತಿ, ಜನಾಂಗ ಒಟ್ಟುಗೂಡಿಸಿಕೊಂಡು ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಇಲ್ಲಿಯವರೆಗೆ 150ಕ್ಕೂ ಅಧಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ