Breaking News

ವಿಜಯಪುರ : ಗಂಗಾಪೂಜೆ ನೆರವೇರಿಸಿ ಕೃಷ್ಣೆಗೆ ಬಾಗಿನ ಅರ್ಪಿಸಿದ ಸಿ.ಎಂ. ಬೊಮ್ಮಾಯಿ

Spread the love

ವಿಜಯಪುರ : ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿರುವ ಆಲಮಟ್ಟಿಯ ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಗಂಗಾಪೂಜೆ ನೆರವೇರಿಸಿ, ಬಾಗಿನ ಅರ್ಪಿಸಿದರು.

ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿಯ ಶಾಸ್ತ್ರೀ ಜಲಾಶಯದಲ್ಲಿ ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಬಾಗಿನ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಉಮೇಶ ಕತ್ತಿ, ಸಚಿವರಾದ ಮುರುಗೇಶ‌ ನಿರಾಣಿ, ಸಿ.ಸಿ.ಪಾಟೀಲ, ಗೋವಿಂದ ಕಾರಜೋಳ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಎ.ಎಸ್.ಪಾಟೀಲ, ನಡಹಳ್ಳಿ, ಯಶವಂತರಾಯಗೌಡ ಪಾಟೀಲ, ಈರಣ್ಣ ಚರಂತಿಮಠ, ಸಿದ್ದು ಸವದಿ, ದೊಡ್ಡನಗೌಡ ಪಾಟೀಲ, ಸಂಸದರಾದ ರಮೇಶ ಜಿಗಜಿಣಗಿ, ಪಿ.ಸಿ.ಗದ್ದಿಗೌಡರ, ವಿಜಯಪುರ ಜಿಲ್ಲಾಧಿಕಾರಿ ಸುನಿಲಕುಮಾರ, ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾ.ರಾಜೇಂದ್ರನ್ ಸೇರಿದಂತೆ ಇತರೆ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ