ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಹಿಂಡಲಗಾ ಜೈಲಿನಿಂದ ಜಾಮೀನಿನ ಮೇಲೆ ಹೊರಬಂದರು. ವಿನಯ್ ಕುಲಕರ್ಣಿ ಜೈಲಿನಿಂದ ಹೊರಬರುತ್ತಿದ್ದಂತೆ ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿ ತಿನ್ನಿಸಿ ಸ್ವಾಗತಿಸಿದ್ದಾರೆ. ಇದಕ್ಕೆ ಬಿಜೆಪಿ ಟೀಕೆ ಮಾಡಿದೆ.
ಕಾಂಗ್ರೆಸ್ ಪಕ್ಷ ನೈತಿಕವಾಗಿ ಅಧಃಪತನ ಕಂಡಿದೆ ಎಂಬುದನ್ನು ಸೂಚಿಸಲು ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ. ಕೊಲೆ ಆರೋಪಿ ಜಾಮೀನು ಪಡೆದು ಜೈಲಿನಿಂದ ಹೊರ ಬಂದರೆ ಯುದ್ಧ ಗೆದ್ದು ಬಂದವರಂತೆ ಸ್ವಾಗತಿಸಲಾಗುತ್ತಿದೆ. ಕೊಲೆ ಆರೋಪಿಗಳಿಗೆ ಭವ್ಯ ಸ್ವಾಗತ ನೀಡುವುದನ್ನು ಕಾಂಗ್ರೆಸ್ ವರಿಷ್ಠರು ಬೆಂಬಲಿಸುತ್ತಾರೆಯೇ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ವಿವಾದಾತ್ಮಕತೆಯೇ ನಾಯಕತ್ವದ ಗುಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರೇ ಬೆನ್ನು ತಟ್ಟಿಕೊಂಡ ಮೇಲೆ ವಿನಯ್ ಕುಲಕರ್ಣಿ ಅವರಂಥಹ ಕೊಲೆ ಆರೋಪಿಗೆ ಭವ್ಯ ಸ್ವಾಗತ ಸಿಗುವುದರಲ್ಲಿ ಹೆಚ್ಚುಗಾರಿಕೆ ಇಲ್ಲ. ತಿಹಾರ್, ಹಿಂಡಲಗಾ ಜೈಲಿನಿಂದ ಹೊರಬಂದವರೇ ಕಾಂಗ್ರೆಸ್ ಪಕ್ಷಕ್ಕೆ ಶ್ರೇಷ್ಠರು ಎಂದು ಬಿಜೆಪಿ ಟೀಕಿಸಿದೆ.
Laxmi News 24×7