Breaking News
Home / ಜಿಲ್ಲೆ / ಬೆಂಗಳೂರು / ತಿಹಾರ್, ಹಿಂಡಲಗಾ ಜೈಲಿನಿಂದ ಹೊರಬಂದವರೇ ಕಾಂಗ್ರೆಸ್ ಪಕ್ಷಕ್ಕೆ ಶ್ರೇಷ್ಠರು: ಬಿಜೆಪಿ ಟೀಕೆ

ತಿಹಾರ್, ಹಿಂಡಲಗಾ ಜೈಲಿನಿಂದ ಹೊರಬಂದವರೇ ಕಾಂಗ್ರೆಸ್ ಪಕ್ಷಕ್ಕೆ ಶ್ರೇಷ್ಠರು: ಬಿಜೆಪಿ ಟೀಕೆ

Spread the love

ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಹಿಂಡಲಗಾ ಜೈಲಿನಿಂದ ಜಾಮೀನಿನ ಮೇಲೆ ಹೊರಬಂದರು. ವಿನಯ್ ಕುಲಕರ್ಣಿ ಜೈಲಿನಿಂದ ಹೊರಬರುತ್ತಿದ್ದಂತೆ ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿ ತಿನ್ನಿಸಿ ಸ್ವಾಗತಿಸಿದ್ದಾರೆ. ಇದಕ್ಕೆ ಬಿಜೆಪಿ ಟೀಕೆ ಮಾಡಿದೆ.

ಕಾಂಗ್ರೆಸ್ ಪಕ್ಷ ನೈತಿಕವಾಗಿ ಅಧಃಪತನ ಕಂಡಿದೆ ಎಂಬುದನ್ನು ಸೂಚಿಸಲು ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ. ಕೊಲೆ ಆರೋಪಿ ಜಾಮೀನು ಪಡೆದು ಜೈಲಿನಿಂದ ಹೊರ ಬಂದರೆ ಯುದ್ಧ ಗೆದ್ದು ಬಂದವರಂತೆ ಸ್ವಾಗತಿಸಲಾಗುತ್ತಿದೆ. ಕೊಲೆ ಆರೋಪಿಗಳಿಗೆ ಭವ್ಯ ಸ್ವಾಗತ ನೀಡುವುದನ್ನು ಕಾಂಗ್ರೆಸ್ ವರಿಷ್ಠರು ಬೆಂಬಲಿಸುತ್ತಾರೆಯೇ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ವಿವಾದಾತ್ಮಕತೆಯೇ ನಾಯಕತ್ವದ ಗುಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರೇ ಬೆನ್ನು ತಟ್ಟಿಕೊಂಡ ಮೇಲೆ ವಿನಯ್ ಕುಲಕರ್ಣಿ ಅವರಂಥ‌ಹ ಕೊಲೆ ಆರೋಪಿಗೆ ಭವ್ಯ ಸ್ವಾಗತ ಸಿಗುವುದರಲ್ಲಿ ಹೆಚ್ಚುಗಾರಿಕೆ ಇಲ್ಲ. ತಿಹಾರ್, ಹಿಂಡಲಗಾ ಜೈಲಿನಿಂದ ಹೊರಬಂದವರೇ ಕಾಂಗ್ರೆಸ್ ಪಕ್ಷಕ್ಕೆ ಶ್ರೇಷ್ಠರು ಎಂದು ಬಿಜೆಪಿ ಟೀಕಿಸಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ