ಈಗಾಗಲೇ 16,850 ಪ್ರೌಢ ಶಾಲೆಗಳು ಹಾಗೂ 5,492 ಪದವಿ ಪೂರ್ವ ಕಾಲೇಜುಗಳಲ್ಲಿ ಶಾಲೆ ಪುನಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳ್ಳಗ್ಗೆ 10 ರಿಂದ 1:30 ರವರೆಗೆ ಮಾತ್ರ ತರಗತಿಗಳು ನಡೆಯಲಿವೆ. ಶಾಲಾರಂಭಕ್ಕೆ ಈಗಾಗಲೇ ಶಿಕ್ಷಣ ಇಲಾಖೆ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ.
ಬೆಂಗಳೂರು: ಸೋಮವಾರದಿಂದ (ಆಗಸ್ಟ್ 23) ಕರ್ನಾಟಕ ರಾಜ್ಯದಲ್ಲಿ ಶಾಲೆ ಶುರು ಆಗಲಿದೆ. ಕಳೆದ ಒಂದುವರೆ ವರ್ಷದಿಂದ ಬಂದ್ ಆಗಿದ್ದ ಶಾಲೆಗಳು ಪುನಾರಂಭ ಪಡೆಯಲಿವೆ. ಕೊರೊನಾ ಪ್ರಕರಣಗಳು ಇನ್ನೂ ಸಂಪೂರ್ಣ ಇಳಿಕೆಯಾಗಿಲ್ಲ. ಕೊವಿಡ್19 ಮೂರನೇ ಅಲೆ ಎಂಬ ಆತಂಕವೂ ಮುಂದಿದೆ. ಈ ಮಧ್ಯೆ, ಶಾಲೆ ಓಪನ್ ಆಗಲಿದೆ. ಹಂತ ಹಂತವಾಗಿ ಶಾಲೆ ಆರಂಭ ಆಗಲಿರುವ ಬಗ್ಗೆ ಸರ್ಕಾರ ಮಾಹಿತಿ ನೀಡಿದೆ. ನಾಳೆಯಿಂದ 9 ರಿಂದ 12 ನೇ ತರಗತಿಗಳಿಗೆ ಶಾಲೆ ಶುರು ಆಗಲಿದೆ. ಶೇಕಡಾ 2 ಕ್ಕಿಂತ ಹೆಚ್ಚು ಪಾಸಿಟಿವಿಟಿ ರೇಟ್ ಇರುವ ಜಿಲ್ಲೆಗಳಲ್ಲಿ ನಾಳೆ (ಆಗಸ್ಟ್ 23) ಶಾಲೆ ಆರಂಭ ಆಗುವುದಿಲ್ಲ ಎಂದೂ ಮಾಹಿತಿ ನೀಡಲಾಗಿದೆ.
ಈಗಾಗಲೇ 16,850 ಪ್ರೌಢ ಶಾಲೆಗಳು ಹಾಗೂ 5,492 ಪದವಿ ಪೂರ್ವ ಕಾಲೇಜುಗಳಲ್ಲಿ ಶಾಲೆ ಪುನಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳ್ಳಗ್ಗೆ 10 ರಿಂದ 1:30 ರವರೆಗೆ ಮಾತ್ರ ತರಗತಿಗಳು ನಡೆಯಲಿವೆ. ಶಾಲಾರಂಭಕ್ಕೆ ಈಗಾಗಲೇ ಶಿಕ್ಷಣ ಇಲಾಖೆ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ.
ಶಾಲೆ ಆರಂಭವಾದ್ರೆ ಏನಿರುತ್ತೆ ಗೈಡ್ಲೈನ್ಸ್; ಶಾಲೆಗಳ ಆರಂಭಕ್ಕೆ ಹೇಗಿದೆ ತಯಾರಿ?
- ಶಾಲೆಯಲ್ಲಿ ಎರಡಕ್ಕಿಂತ ಹೆಚ್ಚು ವಿದ್ಯಾರ್ಥಿಗಳಲ್ಲಿ ಸೋಂಕು ಕಂಡು ಬಂದರೆ ಒಂದು ವಾರ ಶಾಲೆ ಸೀಲ್ಡೌನ್ ಆಗಲಿದೆ
- ಶೇಕಡಾ 2 ಕ್ಕಿಂತ ಹೆಚ್ಚು ಪಾಸಿಟಿವಿಟಿ ರೇಟ್ ಇರುವ ಜಿಲ್ಲೆಗಳಲ್ಲಿ ಶಾಲೆ ನಾಳೆ ಆರಂಭ ಆಗುವುದಿಲ್ಲ. ಶಾಲೆ ಬಂದ್ ಆಗಿರಲಿದೆ
- ಕೊರೊನಾ ಲಕ್ಷಣ ಕಂಡು ಬರುವ ಮಗುವಿಗೆ ಶಾಲೆಯ ಪ್ರವೇಶ ಇರುವುದಿಲ್ಲ
- ಶಾಲೆ, ಕಾಲೇಜು ಆವರಣದಲ್ಲಿ ಸಮಾಜಿಕ ಅಂತರ ಪಾಲಿಸುವುದು ಕಡ್ಡಾಯ
- ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಂದ ಮಾಸ್ಕ್ ಪಾಲನೆ ಕಡ್ಡಾಯ
- ಶಿಕ್ಷಕ ಹಾಗೂ ಶಾಲಾ ಸಿಬ್ಬಂದಿಗೆ ಕಡ್ಡಾಯ ವ್ಯಾಕ್ಸಿನ್ ಆಗಿರಬೇಕು
- ವಿದ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರ ತರಬೇಕು
- ಶಾಲೆ-ಕಾಲೇಜಿಗೆ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯ ಇಲ್ಲ
- ಆನ್ಲೈನ್ ಹಾಗೂ ಆಫ್ಲೈನ್ ಎರಡಕ್ಕೂ ವಿದ್ಯಾರ್ಥಿಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ
- ಕೊಠಡಿಯಲ್ಲಿ 20 ವಿದ್ಯಾರ್ಥಿಗಳಿಗೆ ಮಾತ್ರ ಕಲಿಕೆಗೆ ಅವಕಾಶ ನೀಡಲಾಗಿದೆ
- ಶಾಲೆಯ ಇಡೀ ಆವರಣ ಸ್ಯಾನಿಟೈಸ್ ಮಾಡಬೇಕು
- ಕುಡಿಯುವ ನೀರಿನ ಸೌಲ್ಯಭ್ಯ ನೀಡಬೇಕು ಹಾಗೂ ಆವರಣ ಸ್ವಚ್ಛಗೊಳಿಸಬೇಕು
- ಶಾಲೆಯ ಶೌಚಾಲಯವನ್ನು ಶುಚಿಗೊಳಿಸಿ ವಿದ್ಯಾರ್ಥಿಗಳಿಗೆ ಅನಕೂಲ ಮಾಡಬೇಕು
- ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಸಾಮಾಜಿಕ ಅಂತರ ಕಾಪಾಡುವುದರ ಜೊತೆ ಆಗಾಗ ಕೈ ತೊಳೆಯಬೇಕು
- ಮನೆಯಿಂದಲೇ ಊಟದ ಡಬ್ಬಿ ಹಾಗೂ ಕಾಯಿಸಿ ಆರಿಸಿದ ನೀರನ್ನು ತರಬೇಕು
- ಬಿಸಿಯಾದ ಆಹಾರ ಪದಾರ್ಥ ಸೇವಿಸಬೇಕು
- ಯಾವುದೇ ಪೆನ್ನು, ನೋಟ್ ಬುಕ್, ನೀರಿನ ಬಾಟಲ್ ಹಂಚಿಕೊಳ್ಳಬಾರದು
- ವಿದ್ಯಾರ್ಥಿಗಳು ಸಾಮಾಜಿಕ ಅಂತರದೊಂದಿಗೆ ಶಾಲೆ ಪ್ರವೇಶ ಮಾಡಬೇಕು
- ವಿದ್ಯಾರ್ಥಿಗಳು ಬೇಕಾದ ತಿಂಡಿ ಆಹಾರವನ್ನು ಮನೆಯಿಂದಲೇ ತರಬೇಕು
- ಶಾಲಾ ಪ್ರವೇಶಕ್ಕೆ ಥರ್ಮಲ್ ಸ್ಕ್ಯಾನಿಂಗ್ ಮಾಡಬೇಕು
ಐದು ಜಿಲ್ಲೆಗಳಿಗೆ ಶಾಲೆ ಓಪನ್ ಭಾಗ್ಯ ಸಧ್ಯಕ್ಕಿಲ್ಲ
ಶೇಕಡಾ 2 ಕ್ಕಿಂತ ಹೆಚ್ಚು ಪಾಸಿಟಿವಿಟಿ ರೇಟ್ ಇರುವ ಜಿಲ್ಲೆಗಳಾ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಉಡಪಿ ಹಾಗೂ ಹಾಸನ ಜಿಲ್ಲೆಗಳಲ್ಲಿ ಸೋಮವಾರದಿಂದ ಶಾಲೆ ಆರಂಭ ಇರುವುದಿಲ್ಲ. ಕೇರಳ ಭಾಗದಲ್ಲಿ ಕೊರೊನಾ ಪ್ರಕರಣಗಳು ಏರಿಕೆ ಆಗಿರುವುದರಿಂದ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕೊವಿಡ್ ಕೇಸ್ಗಳ ಸಂಖ್ಯೆ ಇಳಿಕೆಯಾಗಿಲ್ಲ. ಹೀಗಾಗಿ ಪಾಸಿಟಿವಿಟಿ ದರ ನಿಗದಿತ ಪ್ರಮಾಣಕ್ಕೆ ಇಳಿಕೆಯಾಗಿಲ್ಲ. ಹೀಗಾಗಿ ಈ ಐದು ಜಿಲ್ಲೆಗಳಲ್ಲಿ ಸ್ಥಿತಿಗತಿ ಹೊಂದಿಕೊಂಡು ಶಾಲೆ ಪುನಾರಂಭ ಆಗಲಿದೆ.