ಲಖನೌ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್(89) ಬಹುಅಂಗಾಂಗ ವೈಫಲ್ಯದಿಂದಾಗಿ ಇಂದು ನಿಧನರಾಗಿದ್ದಾರೆ.
ಕಲ್ಯಾಣ್ ಸಿಂಗ್ ಅವರನ್ನ ಜುಲೈ 4 ರಂದು ಲಖನೌನ SGPGI ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕಲ್ಯಾಣ್ ಸಿಂಗ್ 2 ಬಾರಿ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು. 2014-2019ರ ಅವಧಿಯಲ್ಲಿ ರಾಜಸ್ಥಾನ್ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.
ಇನ್ನು ಕಲ್ಯಾಣ್ ಸಿಂಗ್ ಸಾವಿಗೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಕಲ್ಯಾಣ್ ಸಿಂಗ್ ಮಹಾನಾಯಕ, ಮಹಾನ್ ಮಾನವ. ಯುಪಿ ಅಭಿವೃದ್ಧಿಗೆ ಅಳಿಸಲಾಗದ ಕೊಡುಗೆ ನೀಡಿದ್ದಾರೆ. ಭಾರತೀಯ ಮೌಲ್ಯಗಳನ್ನ ಧೃಡವಾಗಿ ಬೇರೂರಿಸಿಕೊಂಡಿದ್ರು. ಅವರ ಮುಂದಿನ ಪೀಳಿಗೆಗಳು ಕೃತಜ್ಞರಾಗಿರುತ್ತಾರೆ ಎಂದು ಕಲ್ಯಾಣ್ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
Laxmi News 24×7