Breaking News

ಜಾತಿ ಗಣತಿ’ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು?

Spread the love

ಹುಬ್ಬಳ್ಳಿ : ಜಾತಿ ಗಣತಿ ವಿಚಾರದ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದು, ಜಾತಿ ಗಣತಿ ವರದಿಯನ್ನು ಹಿಂದುಳಿದ ಆಯೋಗ ಕೂಡ ಪರಿಶೀಲನೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಜಾತಿ ಗಣತಿ ವಿಚಾರ ನ್ಯಾಯಾಲಯದ ಅಂಗಳದಲ್ಲಿದ್ದು, ಇತ್ಯರ್ಥಕ್ಕೆ ಕಾಲಾವಕಾಶವಿದೆ. ಈ ಕುರಿತು ವಿರೋಧ ಪಕ್ಷದವರಷ್ಟೇ ಅಲ್ಲ. ಯಾರೂ ಬೇಕಾದರೂ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಬಹುದು ಎಂದು ಹೇಳಿದ್ದಾರೆ.

ಗುಂಡು ಹಾಕಿದರೂ ಸಾರ್ವಜನಿಕ ಗಣೇಶ ಚತುರ್ಥಿ ಆಚರಣೆ ಮಾಡುತ್ತೇವೆ ಎಂಬ ಬಸನಗೌಡ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಅವರ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ, ಈ ಬಗ್ಗೆ ಅವರನ್ನೇ ಕೇಳಿ ಎಂದರು.

 

 


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ