Breaking News
Home / ಜಿಲ್ಲೆ / ಬೆಂಗಳೂರು / ಕೊರೊನಾ ನಿಯಂತ್ರಣ: ಪ್ರಧಾನಿ ಜೊತೆ 4 ಪ್ರಮುಖ ಬೇಡಿಕೆ ಸಲ್ಲಿಸಿದ ಕರ್ನಾಟಕ

ಕೊರೊನಾ ನಿಯಂತ್ರಣ: ಪ್ರಧಾನಿ ಜೊತೆ 4 ಪ್ರಮುಖ ಬೇಡಿಕೆ ಸಲ್ಲಿಸಿದ ಕರ್ನಾಟಕ

Spread the love

ಬೆಂಗಳೂರು: ಕೋವಿಡ್‌ 19 ನಿಯಂತ್ರಣ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರ ಜೊತೆಗಿನ ಸಭೆಯಲ್ಲಿ ಕರ್ನಾಟಕ ಸರ್ಕಾರ ಪ್ರಮುಖವಾಗಿ 4 ಬೇಡಿಕೆಯನ್ನು ಸಲ್ಲಿಸಿದೆ.ವಿಡಿಯೋ ಸಂವಾದದಲ್ಲಿ ಉಪಮುಖ್ಯಮಂತ್ರಿ ಅಶ್ವಥ್‍ನಾರಾಯಣ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ರಾಜ್ಯದಲ್ಲಿ ಕೋವಿಡ್ ನಿರ್ವಹಣೆಯ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮಾಹಿತಿ ಒದಗಿಸಿದರು.ಸಭೆಯಲ್ಲಿ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳನಾಡು, ಬಿಹಾರ್, ಗುಜರಾತ್, ಪಂಜಾಬ್, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು

ಕರ್ನಾಟಕದ ಬೇಡಿಕೆಗಳು:
1. ಕೋವಿಡ್ ಸಂಬಂಧಿತ ಚಟುವಟಿಕೆಗಳಿಗೆ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಅಂತಿಮ ವರ್ಷದ ಪೂರ್ವದಲ್ಲಿರುವ ಪ್ಯಾರಾ ಮೆಡಿಕಲ್ ಮತ್ತು ವೈದ್ಯಕೀಯ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ಅನುಮತಿ ಕೋರಲಾಯಿತು.

2. ವೈದ್ಯಕೀಯ ಕಾಲೇಜುಗಳಲ್ಲಿ ಪ್ರತಿ ವರ್ಷ 10,000 ಪದವಿ ಮತ್ತು 2,000 ಸ್ನಾತಕೋತ್ತರ ಸೀಟುಗಳನ್ನು ಹೆಚ್ಚಿಸಲು ಮನವಿ.

3. ವೈದ್ಯಕೀಯ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಕೋರ್ಸು ಮುಗಿದ ನಂತರ ಕಡ್ಡಾಯವಾಗಿ ಸರ್ಕಾರಿ ಸೇವೆ ಸಲ್ಲಿಸಲು ಮಾರ್ಗಸೂಚಿಗಳನ್ನು ಹೊರಡಿಸಲು ಮನವಿ.

4. ಲಿಕ್ವಿಡ್ ಆಕ್ಸಿಜನ್‌ ಘಟಕಗಳನ್ನು ಲಭ್ಯತೆ ಹಾಗೂ ವೈದ್ಯಕೀಯ ಸಂಸ್ಥೆಗಳಲ್ಲಿ ಆರೋಗ್ಯ ಕುರಿತ ಸಂಶೋಧನೆಯನ್ನು ಕಡ್ಡಾಯಗೊಳಿಸುವ ಬಗ್ಗೆ ಮನವಿ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ