ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್ 26 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶ್ರೀಲಂಕಾದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮದಿಂದ ಆಗಸ್ಟ್ 26ರವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 23ರಿಂದ 26ರವರೆಗೆ ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ವರೆಗೆ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 29 ಹಾಗೂ ಕನಿಷ್ಠ ಉಷ್ಣಾಂಶ 20 ಡಿ.ಸೆ. ಇರಲಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ
Laxmi News 24×7