Breaking News

ಪ್ರಥಮ ವರ್ಷ ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ.!

Spread the love

ಬೆಂಗಳೂರು: ಪ್ರಥಮ ವರ್ಷಕ್ಕೆ ಪ್ರವೇಶ ಪಡೆದವರಿಗೆ ಉಚಿತವಾಗಿ ಟ್ಯಾಬ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಆಗಸ್ಟ್ 1 ರಿಂದ ಪ್ರಥಮ ವರ್ಷದ ಪದವಿ ತರಗತಿಗಳು ಶುರುವಾಗಿವೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಟ್ಯಾಬ್ ಅಗತ್ಯವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತವಾಗಿ ಟ್ಯಾಬ್ ವಿತರಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

2021 -22 ನೇ ಸಾಲಿನಲ್ಲಿ ಪ್ರಥಮ ವರ್ಷದ ಪದವಿ ಕೋರ್ಸ್ ಗೆ ಸರ್ಕಾರಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತವಾಗಿ ಟ್ಯಾಬ್ ನೀಡಲಾಗುವುದು ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ