Breaking News
Home / ರಾಜ್ಯ / 58 ವಾರ್ಡಗಳಿಗೆ ಚುನಾವಣೆ ,ಮತದಾನದ ಅವಧಿ ಒಂದು ಗಂಟೆ ವಿಸ್ತರಣೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

58 ವಾರ್ಡಗಳಿಗೆ ಚುನಾವಣೆ ,ಮತದಾನದ ಅವಧಿ ಒಂದು ಗಂಟೆ ವಿಸ್ತರಣೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

Spread the love

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ 2021 ರ ಕುರಿತು 58 ವಾರ್ಡಗಳಿಗೆ ಚುನಾವಣೆ ವೇಳಾ ಪಟ್ಟಿ ಪ್ರಕಟಿಸಲಾಗಿದ್ದು, ಅದರಂತೆ ಸೆಪ್ಟೆಂಬರ್ 3 ರಂದು ಮತದಾನ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಚುನಾವಣಾ ವೀಕ್ಷಕರನ್ನು ನಿಯೋಜಿಸಿಲಾಗಿದೆ.
ಭೂ ಸ್ವಾಧೀನ (ಪು.ವ.ಮತ್ತು ಪುನಿ) ಬೃಹತ್ ನೀರಾವರಿ ಯೋಜನೆಗಳ ವಿಶೇಷ ಜಿಲ್ಲಾಧಿಕಾರಿಗಳಾದ ಗೀತಾ ಕೌಲಗಿ (ಮೊ. ಸಂಖ್ಯೆ-9448933533) ಅವರನ್ನು ವಾರ್ಡ ಸಂಖ್ಯೆ 1 ರಿಂದ 29 ರವರೆಗೆ ಚುನಾವಣಾ ವೀಕ್ಷಕರನ್ನಾಗಿ ನಿಯೋಜಿಸಿಲಾಗಿದೆ.
ಅದೇ ರೀತಿ, ಕೃಷಿ ಇಲಾಖೆಯ ಜಾಗೃತ ಕೋಶದ ಜಂಟಿ ನಿರ್ದೇಶಕರಾದ ಜಿಲಾನಿ ಮೊಕಾಶಿ (ಮೊ.ಸಂಖ್ಯೆ – 8277934042)  ಅವರನ್ನು ವಾರ್ಡ ಸಂಖ್ಯೆ 30 ರಿಂದ 58 ರವರೆಗೆ ಚುನಾವಣಾ ವೀಕ್ಷಕರನ್ನಾಗಿ ನಿಯೋಜಿಸಿಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  ಮತದಾನದ ಸಮಯವನ್ನು ಮುಂಜಾನೆ 7:00 ಗಂಟೆಯಿಂದ ಸಾಯಂಕಾಲ 5:00 ಗಂಟೆಯವರೆಗೆ ನಿಗದಿಪಡಿಸಲಾಗಿತ್ತು.
ಆದರೆ, ಸೆಪ್ಟೆಂಬರ್ 03 ರಂದು ಜರುಗಲಿರುವ ಮಹಾನಗರ ಪಾಲಿಕೆ ಬೆಳಗಾವಿ ಸಾರ್ವತ್ರಿಕ ಚುನಾವಣೆ ಕುರಿತು ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ರಾಯಬಾಗ ಪಟ್ಟಣ ಪಂಚಾಯತಿ ವಾರ್ಡ ನಂ. 9  ಹಾಗೂ ಪುರಸಭೆ ಸವದತ್ತಿ ಯಲ್ಲಮ್ಮ ವಾರ್ಡ ನಂ. 23 ರ ಮತದಾನದ ಸಮಯವನ್ನು ಮುಂಜಾನೆ 7:00 ಗಂಟೆಯಿಂದ ಸಾಯಂಕಾಲ 6:00 ಗಂಟೆಯವರೆಗೆ ರಾಜ್ಯ ಚುನಾವಣಾ ಆಯೋಗವು ವಿಸ್ತರಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Spread the love

About Laxminews 24x7

Check Also

ಸರ್ಕಾರಿ ವಾಹನದಲ್ಲಿ ಬಿಜೆಪಿ ಹಣ ಸಾಗಣೆ: ದಿನೇಶ್‌ ಗುಂಡೂರಾವ್

Spread the loveಮೈಸೂರು: ‘ಬಿಜೆಪಿ ನಾಯಕರು ಸರ್ಕಾರಿ ವಾಹನಗಳಲ್ಲಿ ಕೋಟ್ಯಂತರ ರೂಪಾಯಿ ಸಾಗಿಸಿ ಹಂಚುತ್ತಿದ್ದಾರೆ. ಐಟಿ, ಇಡಿ ರಕ್ಷಣೆಯಲ್ಲೇ ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ