Breaking News
Home / Uncategorized / ವಿಜಯಪುರ ಜನರಿಗೆ ಸಿಹಿಸುದ್ದಿ ಕೊಟ್ಟ ರೈಲ್ವೆ ಇಲಾಖೆ

ವಿಜಯಪುರ ಜನರಿಗೆ ಸಿಹಿಸುದ್ದಿ ಕೊಟ್ಟ ರೈಲ್ವೆ ಇಲಾಖೆ

Spread the love

ವಿಜಯಪುರ, ಆಗಸ್ಟ್ 24; ನೈಋತ್ಯ ರೈಲ್ವೆ ವಿಜಯಪುರ ಮತ್ತು ಮಂಗಳೂರಿನ ಜನರಿಗೆ ಸಿಹಿಸುದ್ದಿ ಕೊಟ್ಟಿದೆ. ಕೋವಿಡ್ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಮಂಗಳೂರು-ವಿಜಯಪುರ ರೈಲು ಸಂಚಾರ ಪುನಃ ಆರಂಭವಾಗಲಿದೆ. ಶೀಘ್ರದಲ್ಲೇ ರೈಲಿನ ವೇಳಾಪಟ್ಟಿ ಅಂತಿಮಗೊಳ್ಳಲಿದೆ.

ರೈಲು ಪುನಃ ಆರಂಭಿಸಲು ನೈಋತ್ಯ ರೈಲ್ವೆ ಈಗಾಗಲೇ ಸಿದ್ಧತೆ ಆರಂಭಿಸಿದೆ. ಆದರೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ರೈಲು ವೇಳಾಪಟ್ಟಿ ಪರಿಷ್ಕರಣೆ ಮಾಡುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವಗೆ ಮನವಿ ಮಾಡಿದ್ದಾರೆ.

 

ಸದ್ಯ ಇರುವ ಪ್ರಸ್ತಾವನೆ ಪ್ರಕಾರ ವಿಜಯಪುರದಿಂದ ಹೊರಡುವ ರೈಲು ಮಂಗಳೂರಿಗೆ 12.40ಕ್ಕೆ ಆಗಮಿಸಲಿದೆ. ಸಂಜೆ 4.30ಕ್ಕೆ ಮತ್ತೆ ಹೊರಡಲಿದೆ. ಈ ವೇಳಾಪಟ್ಟಿಯಿಂದ ಕರಾವಳಿ ಜನರಿಗೆ ತೊಂದರೆ ಆಗಲಿದೆ ಎಂದು ಸಂಸದರು ರೈಲ್ವೆ ಸಚಿವರ ಗಮನ ಸೆಳೆದಿದ್ದಾರೆ.

 

ರೈಲು ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಬೇಕು. ಈ ಹಿಂದೆ ಇದ್ದಂತೆ ರೈಲು ಬೆಳಗ್ಗೆ 9.30ಕ್ಕೆ ಮಂಗಳೂರು ಜಂಕ್ಷನ್ ತಲುಪಬೇಕು. ಸಂಜೆ 5.30ಕ್ಕೆ ಇಲ್ಲಿಂದ ಹೊರಡಬೇಕು. ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಮನವಿ ಮಾಡಲಾಗಿದೆ.

 

ಮಂಗಳೂರು ಜಂಕ್ಷನ್ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಅನಾನುಕೂಲವಾದಲ್ಲಿ ಬಂದರಿನ ಗೂಡ್‌ಶೆಡ್‌ ಯಾರ್ಡ್‌, ಉಳ್ಳಾಲ ನಿಲ್ದಾಣದಲ್ಲಿ ನಿಲುಗಡೆ ಮಾಡಬಹುದು. ಪುನಃ ಜಂಕ್ಷನ್‌ಗೆ ತಂದು ವಿಜಯಪುರಕ್ಕೆ ಸಂಚಾರ ನಡೆಸಬಹುದು ಎಂದು ನಳಿನ್ ಕುಮಾರ್ ಕಟೀಲ್ ಸಲಹೆಯನ್ನು ನೀಡಿದ್ದಾರೆ.

ಮಂಗಳೂರು-ಚೆನ್ನೈ ರೈಲು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರು-ಚೆನ್ನೈ ನಡುವೆ ನೇರ ರೈಲು ಆರಂಭಿಸಬೇಕು ಎಂದು ರೈಲ್ವೆ ಇಲಾಖೆಗೆ ಮನವಿ ಮಾಡಿದ್ದಾರೆ. ಮಂಗಳೂರು-ಹಾಸನ-ಬೆಂಗಳೂರು ಮಾರ್ಗವಾಗಿ ಚೆನ್ನೈಗೆ ರೈಲು ಸೇವೆ ಆರಂಭಿಸಿದರೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಮಂಗಳೂರು-ಚೆನ್ನೈ ನಡುವಿನ ರೈಲು ಪ್ರಸ್ತುತ ಪಾಲ್ಘಾಟ್, ಕೊಯಮತ್ತೂರು ಮಾರ್ಗವಾಗಿ ಸಂಚಾರ ನಡೆಸುತ್ತಿದೆ. ಮಂಗಳೂರು-ಹಾಸನ-ಚೆನ್ನೈ ಮೂಲಕ ರೈಲು ಸಂಚಾರ ನಡೆಸಿದರೆ ಸುಮಾರು 200 ಕಿ. ಮೀ. ಉಳಿತಾಯವಾಗಲಿದೆ ಎಂದು ಸಂಸದರು ಉಲ್ಲೇಖಿಸಿದ್ದಾರೆ.

ಆಗಸ್ಟ್ 26 ರಿಂದ ವಾಸ್ಕೋ-ಚೆನ್ನೈ ಸೆಂಟ್ರಲ್ ರೈಲು ನೈಋತ್ಯ ರೈಲ್ವೆ ವಾಸ್ಕೋ ಡಾ-ಗಾಮ ಡಾ. ಎಂ. ಜಿ. ಆರ್. ಸೆಂಟ್ರಲ್ ನಡುವೆ ರೈಲನ್ನು ಓಡಿಸುವುದಾಗಿ ಘೋಷಣೆ ಮಾಡಿದೆ. ರೈಲು ನಂಬರ್ 07371/ 07372 ರೈಲು ಆಗಸ್ಟ್ 26ರಿಂದ ವಾರಕ್ಕೊಮ್ಮೆ ಸಂಚಾರ ನಡೆಸಲಿದೆ.

ರೈಲ್ವೆ ಇಲಾಖೆ ರೈಲು ಸಂಖ್ಯೆ 06249/ 06250 ಯಶವಂತಪುರ-ಹಜರತ್ ನಿಜಾಮುದ್ದೀನ್- ಯಶವಂತಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ಸೇವೆಯನ್ನು ಯಶವಂತಪುರದಿಂದ 27/9/2021ರ ವರೆಗೆ ಮತ್ತು ಹಜರತ್ ನಿಜಾಮುದ್ದೀನ್‌ನಿಂದ 30/9/2021ರವರೆಗೆ


Spread the love

About Laxminews 24x7

Check Also

ಮೂರನೇ ಹಂತದ ಚುನಾವಣೆಗೆ ಸಿದ್ಧತೆ: ಮೇ 7ರಂದು ಮತದಾನ

Spread the loveಮೂರನೇ ಹಂತದ ಚುನಾವಣೆಗೆ ಸಿದ್ಧತೆ: ಮೇ 7ರಂದು ಮತದಾನ ಭಾರತದಲ್ಲಿ ಈಗಾಗಲೇ ಎರಡು ಹಂತದ ಮತದಾನ ಮುಕ್ತಾಯಗೊಂಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ