Breaking News

ಉತ್ತರ ಪ್ರದೇಶ, ಕಾಶ್ಮೀರದಿಂದ ಬಂದು ಸರ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಸೆರೆ!

Spread the love

ಬೆಂಗಳೂರು: ಉತ್ತರ ಪ್ರದೇಶ ಮತ್ತು ಕಾಶ್ಮೀರದಿಂದ ನಗರಕ್ಕೆ ಬಂದು ಸರ ಕಳವು ಮಾಡುತ್ತಿದ್ದ ನಾಲ್ವರನ್ನು ಪಶ್ಚಿಮ ವಿಭಾಗ ಪೊಲೀಸರು ಬಂಧಿಸಿದ್ದಾರೆ.

ರಾಹುಲ್, ಗೌರವ್, ನಿತಿನ್, ರಿಯಾಜ್ ಅಹ್ಮದ್ ಮೀರ್, ಕಮಲ್ ಬಂಧಿತರು. ವಿಜಯನಗರ ದಲ್ಲಿ ಪಾದಚಾರಿ ಮಹಿಳೆ ಬಳಿ ಬೈಕ್ ನಲ್ಲಿ ಬಂದ ಆರೋಪಿಗಳ ಚಿನ್ನದ ಸರ ಕದ್ದು ಪರಾರಿ ಆಗಿದ್ದರು. ಇದರ ತನಿಖೆ ಕೈಗೊಂಡ ಪಶ್ಚಿಮ ವಿಭಾಗ ಪೊಲೀಸರು ಆರೋಪಗಳನ್ನು ಬಂಧಿಸಿದ್ದಾರೆ.

ಆರೋಪಿಗಳ ವಿಚಾರಣೆ ಯಿಂದ ವಿಜಯನಗರ, ಕೆಂಗೇರಿ, ಮಾಗಡಿ ರಸ್ತೆ, ತಿಲಕನಗರದಲ್ಲಿ ನಡೆದಿರುವ ಸರ ಕಳವು ಪ್ರಕರಣಗಳು ಬೆಳಕಿಗೆ ಬಂದಿವೆ. 13 ಲಕ್ಷ ಮೌಲ್ಯದ 230 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ