Home / ರಾಜಕೀಯ / ಸಿಲಿಕಾನ್ ಸಿಟಿಯಲ್ಲಿ ಸುರಿದ ಧಾರಾಕಾರ ಮಳೆಗೆ ಹೆಗಡೆ ನಗರದ ಬ್ರಿಡ್ಜ್ ಬಳಿ ರಸ್ತೆ ಕುಸಿತ

ಸಿಲಿಕಾನ್ ಸಿಟಿಯಲ್ಲಿ ಸುರಿದ ಧಾರಾಕಾರ ಮಳೆಗೆ ಹೆಗಡೆ ನಗರದ ಬ್ರಿಡ್ಜ್ ಬಳಿ ರಸ್ತೆ ಕುಸಿತ

Spread the love

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಂಜೆ ಸುರಿದ ಧಾರಾಕಾರ ಮಳೆಗೆ ಹೆಗಡೆ ನಗರದ ಬ್ರಿಡ್ಜ್ ಬಳಿ ರಸ್ತೆ ಕುಸಿತಗೊಂಡಿದೆ. ಹೆಗಡೆನಗರದ ಬ್ರಿಡ್ಜ್ ಬಳಿಯ ಎರಡ್ಮೂರು ಕಡೆ ಸುಮಾರು ಎಂಟು ಅಡಿ ಆಳಕ್ಕೆ ರಸ್ತೆ ಕುಸಿದಿದೆ.

ಪರಿಣಾಮ ಸ್ಟೀಲ್ ಕಂಬಿ ಸಾಗಿಸುತ್ತಿದ್ದ ಟ್ರಕ್ವೊಂದು ರಸ್ತೆ ಮಧ್ಯದಲ್ಲೇ ಪಲ್ಟಿಯಾಗಿದೆ. ರಸ್ತೆಯಲ್ಲಿ ಒಳಚರಂಡಿ ಹಾಗೂ ಕಾವೇರಿ ಪೈಪ್ ಲೈನ್ ಅಳವಡಿಕೆ ಕಾಮಗಾರಿ ನಡೆಯುತ್ತಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ಕಳಪೆ ಕಾಮಗಾರಿಯಿಂದ ರಸ್ತೆ ಕುಸಿದಿರುವ ಶಂಕೆ ವ್ಯಕ್ತವಾಗಿದೆ.


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ