Breaking News

ವಿಷಾಹಾರ ಸೇವಿಸಿ 100ಕ್ಕೂ ಹೆಚ್ಚು ಜನ ಅಸ್ವಸ್ಥ

Spread the love

ದಾವಣಗೆರೆ, ಆ.25- ವಿಷಾಹಾರ ಸೇವಿಸಿ 100ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿರುವ ಘಟನೆ ದಾವಣಗೆರೆ ಜಿಲ್ಲಾಯ ಜಗಳೂರು ತಾಲೂಕಿನ ಬೆಣ್ಣೆಹಳ್ಳಿ ಗ್ರಾಮದಲ್ಲಿ ಜರುಗಿದೆ. ಅದೃಷ್ಟವಷಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಬೆಣ್ಣೆಹಳ್ಳಿ ಗ್ರಾಮದ ವ್ಯಕ್ತಿಯೊಬ್ಬರ ಮನೆಯಲ್ಲಿ ಸೀಮಂತ ಕಾರ್ಯಕ್ರಮ ಜರುಗಿದ್ದು, ಈ ವೇಳೆ ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ಹೋಳಿಗೆ-ಸೀಕರಣೆ ಸಿಹಿ ಅಡುಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.

ಈ ಕಾರ್ಯಕ್ರಮದಲ್ಲಿ ನೂರಾರು ಜನರು ಸಿಹಿಯೂಟ ಸೇವಿಸಿದ್ದರು. ಆಹಾರ ಸೇವಿಸಿದ ಬೆನ್ನಲ್ಲೇ 100ಕ್ಕೂ ಹೆಚ್ಚು ಜನರಿಗೆ ವಾಂತಿ-ಭೇದಿ ಕಾಣಿಸಿಕೊಂಡಿದೆ. ತಕ್ಷಣ ಎಲ್ಲರನ್ನೂ ಹತ್ತಿರದ ಬೆಣ್ಣೆಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ರವಾನಿಸಿದ್ದು, ಹಲವರು ಗುಣಮುಖರಾಗಿ ಮನೆಗೆ ತೆರಳಿದ್ದಾರೆಂದು ತಿಳಿದುಬಂದಿದೆ.

ಇನ್ನು 20ಕ್ಕೂ ಹೆಚ್ಚು ಜನರಿಗೆ ಜಗಳೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.


Spread the love

About Laxminews 24x7

Check Also

ಅಡಿಕೆ ಸಾಗಿಸುತ್ತಿದ್ದ VRL ಲಾರಿ ತೋಟಕ್ಕೆ ಉರುಳಿ ಸಂಪೂರ್ಣ ಜಖಂ!

Spread the loveಶಿರಸಿ:ಶಿರಸಿಯಿಂದ ಹುಬ್ಬಳ್ಳಿಗೆ ಅಡಿಕೆ ಸಾಗಿಸುತ್ತಿದ್ದ VRL ಸಂಸ್ಥೆಗೆ ಸೇರಿದ ಲಾರಿಯೊಂದು ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ಕಳೆದುಕೊಂಡು ರಸ್ತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ