Breaking News

ಮತ್ತೆ ರಣಕಹಳೆ ಊದಿದ ಪಂಚಮಸಾಲಿ ಸಮುದಾಯ, ಇವತ್ತಿನಿಂದ್ಲೇ ‘ಪಂಚಮಸಾಲಿ’ ಹೋರಾಟ ಶುರು

Spread the love

ಬೆಂಗಳೂರು: ಸೆಪ್ಟಂಬರ್ 13 ರಿಂದ ವಿಧಾನ ಮಂಡಲ ಅಧಿವೇಶನ ಶುರುವಾಗ್ತಿದೆ. ಇದರ ಬೆನ್ನಲ್ಲೇ ಮತ್ತೆ ಮೀಸಲಾತಿ ಕಿಚ್ಚು ಹೊತ್ತಿಕೊಳ್ಳೋ ಸಾಧ್ಯತೆ ಇದೆ. ಯಾಕೆಂದ್ರೆ, ಪಂಚಮಸಾಲಿ ಸಮುದಾಯ 2ಎ ಮೀಸಲಾತಿಗೆ(2A Reservation Row )ಮತ್ತೆ ರಣಕಹಳೆ ಊದಿದೆ. ಇದ್ರಿಂದ ಬಸವರಾಜ ಬೊಮ್ಮಾಯಿ(Basavaraj Bommai) ಸರ್ಕಾರಕ್ಕೆ ಮೀಸಲಾತಿ ಸವಾಲ್ ಎದುರಾಗಿದೆ.

2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ಪ್ರತಿಭಟನೆ ಮಾಡಿತ್ತು. ಜಯಮೃತ್ಯುಂಜಯ ಸ್ವಾಮೀಜಿ ಪಾದಯಾತ್ರೆ ನಡೆಸಿದ್ರು. ದೊಡ್ಡ ಮಟ್ಟದಲ್ಲಿ ಸಮಾವೇಶ ಕೂಡ ಮಾಡಿದ್ರು. ಬಿ.ಎಸ್.ಯಡಿಯೂರಪ್ಪ ಸರ್ಕಾರ ಮೀಸಲಾತಿ ಕುರಿತು ಕೆಲ ಭರವಸೆ ಕೊಟ್ಟಿತ್ತು. ಆ ಭರವಸೆ ಇನ್ನೂ ಈಡೇರಿಲ್ಲ. ಇದೇ ಕಾರಣಕ್ಕೆ ಮತ್ತೆ ಪಂಚಮಸಾಲಿ ಸಮುದಾಯ ಮತ್ತೆ ಹೋರಾಟಕ್ಕೆ ಇಳಿದಿದೆ. ಇವತ್ತಿನಿಂದ್ಲೇ ಹೋರಾಟ ಶುರು ಮಾಡ್ತಿದೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ