ಬೆಂಗಳೂರು, ಆ.26- ಬಿಜೆಪಿ ಸರ್ಕಾರದ ಹಲವು ನೀತಿಗಳನ್ನು ಖಂಡಿಸಿ ಕಾಂಗ್ರೆಸ್ ಬಿಬಿಎಂಪಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿತು. ಜನವಿರೋಧಿ ಕೇಂದ್ರ, ರಾಜ್ಯ ಹಾಗೂ ಬಿಬಿಎಂಪಿ ನೀತಿಗಳ ವಿರುದ್ಧ ಕೈ ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ನಡೆಸಿದರು. ಬೆಂಗಳೂರು ಕೇಂದ್ರ, ದಕ್ಷಿಣ, ಮತ್ತು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸಲೀಂ ಅಹಮ್ಮದ್, ರಿಜ್ವಾನ್ ಅರ್ಷದ್, ರಾಮಲಿಂಗಾರೆಡ್ಡಿ ಮತ್ತಿತರ ನಾಯಕರ ನೇತೃತ್ವದಲ್ಲಿ ಪಾಲಿಕೆಗೆ ಮುತ್ತಿಗೆ ಹಾಕಿ ಬಿಬಿಎಂಪಿ ಚಲೋ ಎಂಬ ಘೋಷವಾಕ್ಯದೊಂದಿಗೆ ಪ್ರತಿಭಟನೆ ನಡೆಸಲಾಯಿತು.ವಲಯ ವರ್ಗೀಕರಣ ನೆಪದಲ್ಲಿ ಸ್ವತ್ತು ಮಾಲೀಕರ ಮೇಲೆ 120 ಕೋಟಿ ಕಂದಾಯಕ್ಕೆ 240 ಕೋಟಿ ಬಡ್ಡಿ ವಸೂಲಿ ಮತ್ತು ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ದರ ಹೆಚ್ಚಳದ ವಿರುದ್ಧ ಘೋಷಣೆ ಕೂಗಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಹಲಸೂರು ಗೇಟ್, ಎಸಿಪಿ ಫಾರೂಖಿ ಹಾಗೂ ಪಿಐ ದೀಪಕ್ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಬಿಬಿಎಂಪಿ ಆವರಣದಲ್ಲಿ ಸುಮಾರು 70 ಪೊಲೀಸರು ಹಾಗೂ ಒಂದು ಕೆಎಸ್‍ಆರ್‍ಪಿ ತುಕಡಿ ನಿಯೋಜನೆ ಮಾಡಲಾಗಿದೆ.
ರಾಜ್ಯ ಹಾಗೂ ಕೇಂದ್ರದ ವಿರುದ್ಧ ವಿಧಾನ ಪರಿಷತ್ ಸದಸ್ಯ ಪಿ.ಆರ್.ರಮೇಶ್ ಅಸಮಾಧಾನ ಹೊರಹಾಕಿ, ವಿನಾಕಾರಣ ನಗರದ ಜನತೆ ಮೇಲೆ ಆರ್ಥಿಕ ಹೊರೆ ಹೇರುತ್ತಿದ್ದಾರೆ. ಬಿಡಿಎಯನ್ನು ಖಾಸಗೀಕರಣ ಮಾಡಲು ಹೊರಟಿದ್ದಾರೆ. ಎಲ್ಲಾ ಕಾಂಪ್ಲೆP್ಸï ಗಳನ್ನು ಮಾರಾಟ ಮಾಡಲು ಹೊರಟಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಗಳಿಗೆ ಮುಂದಾಗಿದ್ದಾರೆ. ಕೂಡಲೇ ಅನಧಿಕೃತ ಹೊರೆಯಾಗುತ್ತಿರುವ ಹೆಚ್ಚುವರಿ ತೆರಿಗೆಯನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು.