ನವದೆಹಲಿ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಮ್ಮ ನೇಮಕಾತಿ ವಾರಂಟ್ʼಗಳಿಗೆ ಸಹಿ ಹಾಕಿದ್ದು, ಮೂವರು ಮಹಿಳೆಯರು ಸೇರಿದಂತೆ ಒಂಬತ್ತು ಹೊಸ ನ್ಯಾಯಾಧೀಶರನ್ನ ಗುರುವಾರ ಸುಪ್ರೀಂ ಕೋರ್ಟ್ʼಗೆ ನೇಮಿಸಲಾಗಿದೆ.
ಉನ್ನತ ನ್ಯಾಯಾಲಯದ ಹೊಸ ನ್ಯಾಯಾಧೀಶರಲ್ಲಿ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ಅವರು ಸೆಪ್ಟೆಂಬರ್ 2027ರಲ್ಲಿ ಭಾರತದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ (CJI) ಆಗಲಿದ್ದಾರೆ. ನ್ಯಾಯಮೂರ್ತಿ ಬೆಲಾ ಎಂ ತ್ರಿವೇದಿ, ನ್ಯಾಯಮೂರ್ತಿ ಹಿಮಾ ಕೊಹ್ಲಿ, ನ್ಯಾಯಮೂರ್ತಿ ಸಿ.ಟಿ. ರವಿಕುಮಾರ್, ನ್ಯಾಯಮೂರ್ತಿ ಎಂ.ಎಂ.ಸುಂದ್ರೇಶ್ ಮತ್ತು ಹಿರಿಯ ವಕೀಲ ಮತ್ತು ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿ.ಎಸ್. ನರಸಿಂಹ ಸೇರಿದ್ದಾರೆ.
ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ್ ಓಕಾ, ವಿಕ್ರಮ್ ನಾಥ್ ಮತ್ತು ಜಿತೇಂದ್ರ ಕುಮಾರ್ ಮಹೇಶ್ವರಿ ಕೂಡ ಸುಪ್ರೀಂ ಕೋರ್ಟ್ ನ್ಯಾಯಧೀಶರಾಗಿ ನೇಮಕಗೊಂಡಿದ್ದಾರೆ.