ಕೂಲಿ ಕೆಲಸಕಕ್ಕೆ ಕರೆದೊಯ್ಯುತ್ತಿದ್ದ ಸುಮಾರು 59 ಮಕ್ಕಳನ್ನ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಮತ್ತು ಸಿರವಾರ ಕ್ರಾಸ್ ಬಳಿ ರಕ್ಷಣೆ ಮಾಡಲಾಗಿದೆ. ಜೊತೆಗೆ ಬಾಲ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ 5 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ರಾಯಚೂರು: ಸರ್ಕಾರ 14 ವರ್ಷದವರೆಗೆ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಬೇಕು. ಜೊತೆಗೆ ಈ ಅವಧಿಯಲ್ಲಿ ಮಕ್ಕಳು ದುಡಿಯುವಂತಿಲ್ಲ ಎಂದು ಭಾರತ ಸಂವಿಧಾನ ತಿಳಿಸಿದೆ. ತಮ್ಮ ತಮ್ಮ ಮನೆಗಳಲ್ಲಿ ಕೆಲಸಗಳನ್ನು ಮಾಡಬಹುದು. ಆದರೆ ಒತ್ತಾಯದಿಂದ ಕೆಲಸಕ್ಕೆ ತಳ್ಳಬಾರದು. ಇದು ಕಾನೂನಿಗೆ ವಿರುದ್ಧವಾಗಿದೆ. ಹೀಗಿದ್ದೂ, ಇಂದು ರಾಯಚೂರಿನಲ್ಲಿ ಸುಮಾರು 59 ಮಕ್ಕಳನ್ನು ಕೂಲಿ ಕೆಲಸಕಕ್ಕೆ ಕರೆದೊಯ್ಯುತ್ತಿದ್ದರು. ಈ ವೇಳೆ ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿ ಮಕ್ಕಳನ್ನು ರಕ್ಷಣೆ ಮಾಡಿದೆ.
ಕೂಲಿ ಕೆಲಸಕಕ್ಕೆ ಕರೆದೊಯ್ಯುತ್ತಿದ್ದ ಸುಮಾರು 59 ಮಕ್ಕಳನ್ನ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಮತ್ತು ಸಿರವಾರ ಕ್ರಾಸ್ ಬಳಿ ರಕ್ಷಣೆ ಮಾಡಲಾಗಿದೆ. ಜೊತೆಗೆ ಬಾಲ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ 5 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಗೂಡ್ಸ್ ವಾಹನಗಳಲ್ಲಿ ಅಕ್ರಮವಾಗಿ ಮಕ್ಕಳನ್ನ ಕೂಲಿ ಕೆಲಸಕ್ಕೆ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಮಕ್ಕಳ ರಕ್ಷಣ ಇಲಾಖೆಯ ಜಿಲ್ಲಾಧಿಕಾರಿ ಮಂಜುನಾಥ್ ಮತ್ತು ಅವರ ತಂಡ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ.
5 ವಾಹನಗಳನ್ನ ಜಪ್ತಿ ಮಾಡಿ ಸಿರವಾರ ಠಾಣೆಯಲ್ಲಿ ಮಕ್ಕಳ ಕಳ್ಳ ಸಾಗಾಣಿಕೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಅಧಿಕಾರಿಗಳು ಮಕ್ಕಳನ್ನು ರಕ್ಷಿಸಿ, ಅವರ ಪೋಷಕರಿಗೆ ಹಸ್ತಾಂತರಿಸಿದರು. ಈ ವೇಳೆ ಮಕ್ಕಳನ್ನ ಕೂಲಿ ಕೆಲಸಕ್ಕೆ ಕಳುಹಿಸದಂತೆ ಪೋಷಕರಿಗೆ ಎಚ್ಚರಿಕೆ ನೀಡಿದರು. ಮಕ್ಕಳನ್ನ ಕೂಲಿ ಕೆಲಸಕ್ಕೆ ತಳ್ಳುತ್ತಿರುವ ಬಗ್ಗೆ ಟಿವಿ9 ಮಂಥನ ಕಾರ್ಯಕ್ರಮದಲ್ಲಿ ವಿಸ್ತೃತ ವರದಿ ಪ್ರಸಾರವಾಗಿತ್ತು. ವರದಿಯಿಂದ ಎಚ್ಚೆತ್ತ ಅಧಿಕಾರಿಗಳು ಜಿಲ್ಲೆಯ ಹಲವೆಡೆ ಕೂಲಿ ಕೆಲಸಕ್ಕೆ ತೆರಳುವ ಮಕ್ಕಳನ್ನು ರಕ್ಷಿಸುವ ಕೆಲಸಕ್ಕೆ ಮುಂದಾಗಿದ್ದಾರೆ.