Breaking News
Home / ರಾಜಕೀಯ / ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು: ಉಮೇಶ್ ಕತ್ತಿ

ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು: ಉಮೇಶ್ ಕತ್ತಿ

Spread the love

ಚಾಮರಾಜನಗರ: ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು, ಅದನ್ನು ನಾವು ಆಹಾರ ಭದ್ರತೆಯಡಿ 4.1 ಕೋಟಿ ಫಲಾನುಭವಿಗಳಿಗೆ ವಿತರಿಸುತ್ತಿದ್ದೇವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದರು.

ಬಂಡೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು. ಆದರೆ ರಾಜಕೀಯ ಕಾರಣದಿಂದ ಸಿದ್ದರಾಮಯ್ಯ 10 ಕೆಜಿ ಅಕ್ಕಿ ಕೊಡುತ್ತೇನೆ ಎನ್ನುತ್ತಿದ್ದಾರೆ ಅಷ್ಟೇ ಎಂದು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.

ಪಡಿತರದಾರರ ಇ ಕೆವೈಸಿ ಶೇ.70 ಮುಗಿದಿದ್ದು, ಅನರ್ಹ ಪಡಿತರದಾರರನ್ನು ಕೈ ಬಿಡುವ ಉದ್ದೇಶದಿಂದ ಕಾರ್ಯಕ್ರಮ ನಡೆಯುತ್ತಿದೆ. ಇ ಕೆವೈಸಿ ಪ್ರಕ್ರಿಯೆ ಪೂರ್ಣವಾದ ಬಳಿಕ ಎಷ್ಟು ಪಡಿತರ ಉಳಿತಾಯ ಆಗಲಿದೆ ಎಂಬುದು ಗೊತ್ತಾಗಲಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

‘ಗೃಹ ಜ್ಯೋತಿ’ ಯೋಜನೆಗೆ ನೀವೂ ನೋಂದಣಿ ಆಗಿಲ್ಲವೇ? ಹಾಗಾದ್ರೆ ಅರ್ಜಿ ಸಲ್ಲಿಕೆ ಹೇಗೆ? ವಿಧಾನ, ಅರ್ಹತೆ ವಿವರ ಇಲ್ಲಿದೆ

Spread the loveಬೆಂಗಳೂರು, ಏಪ್ರಿಲ್ 17: ಕರ್ನಾಟಕ ರಾಜ್ಯ ಕಾಂಗ್ರೆಸ್‌ ಸರ್ಕಾರವು ‘ಗೃಹ ಜ್ಯೋತಿ’ ಯೋಜನೆಯನ್ನು ಘೋಷಿಸಿತ್ತು. ಇದರಿಂದ ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ