Breaking News

ರೈತ ಹೋರಾಟಕ್ಕೆ 9 ತಿಂಗಳು; ಸಿಂಘು ಗಡಿಯಲ್ಲಿ ಎರಡು ದಿನಗಳ ರೈತ ಸಮಾವೇಶ

Spread the love

ನವದೆಹಲಿ: ಕೇಂದ್ರ ಸರ್ಕಾರದ ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಸಿಂಘು ಗಡಿ ಭಾಗದಲ್ಲಿ ರೈತರು ಹೋರಾಟ ಆರಂಭಿಸಿ ಒಂಬತ್ತು ತಿಂಗಳು ಪೂರ್ಣಗೊಂಡಿದ್ದು, ಇದರ ಅಂಗವಾಗಿ ವಿವಿಧ ರೈತ ಸಂಘಟನೆಗಳು ಪ್ರತಿಭಟನಾ ಸ್ಥಳದಲ್ಲೇ ಗುರುವಾರದಿಂದ ಎರಡು ದಿನಗಳ ಕಾಲ ‘ರಾಷ್ಟ್ರೀಯ ಸಮಾವೇಶ’ವನ್ನು ಹಮ್ಮಿಕೊಂಡಿವೆ.

ಈ ಸಮಾವೇಶದಲ್ಲಿ ಮಹಿಳೆ, ರೈತರು, ಯುವ ಹಾಗೂ ಕಾರ್ಮಿಕ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳಿಂದ 1500 ಪ್ರತಿನಿಧಿಗಳು ಭಾಗವಹಿಸಿದ್ದಾರೆ. ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಈ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದು ಹಾಗೂ ಬೇರೆಡೆಗೆ ವಿಸ್ತರಿಸುವ ಕುರಿತು ಚರ್ಚಿಸುವ ಉದ್ದೇಶದೊಂದಿಗೆ ಸಮಾವೇಶ ನಡೆಯುತ್ತಿದೆ.

ಸಮಾವೇಶದ ಭಾಗವಾಗಿ, ಉದ್ಘಾಟನಾ ದಿನವಾದ ಗುರುವಾರ ಮೂರು ಗೋಷ್ಠಿಗಳನ್ನು ಆಯೋಜಿಸಲಾಗಿದೆ. ಕೃಷಿ ಕಾರ್ಮಿಕರು, ಗ್ರಾಮೀಣ ವರ್ಗ, ಕೈಗಾರಿಕಾ ಕಾರ್ಮಿಕರು ಮತ್ತು ಬಡ ಮತ್ತು ಬುಡಕಟ್ಟು ಜನರಿಗೆ ಸಂಬಂಧಿಸಿದ ಗೋಷ್ಠಿಗಳನ್ನು ಆಯೋಜಿಸಲಾಗಿದೆ.

ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದು, ಎಲ್ಲಾ ಬೆಳೆಗಳ ಎಂಎಸ್‌ಪಿಗೆ ಕಾನೂನು ಖಾತರಿಗೊಳಿಸಬೇಕು, ‘ವಿದ್ಯುತ್ ಮಸೂದೆ -2021’ ಅನ್ನು ರದ್ದುಗೊಳಿಸಬೇಕು ಮತ್ತು ವಾಯು ಗುಣಮಟ್ಟ ನಿರ್ವಹಣಾ ಆಯೋಗದ ಅಡಿಯಲ್ಲಿ ‘ಎನ್‌ಸಿಆರ್ ಮತ್ತು ಅಕ್ಕಪಕ್ಕದ ಪ್ರದೇಶಗಳ’ ರೈತರ ಮೇಲೆ ಯಾವುದೇ ಕಾನೂನು ಕ್ರಮ ತೆಗೆದುಕೊಳ್ಳಬಾರದು ಎಂಬ ಪ್ರಮುಖ ಅಂಶಗಳನ್ನು ಈ ಸಮಾವೇಶದಲ್ಲಿ ಚರ್ಚಿಸಲಾಗುತ್ತಿದೆ.


Spread the love

About Laxminews 24x7

Check Also

ಪ್ರಜಾಪ್ರಭುತ್ವ ಉಳಿವಿಗೆ ದೇಶದ ಜನ ಒಂದಾಗಿ: ಮಲ್ಲಿಕಾರ್ಜುನ ಖರ್ಗೆ

Spread the love ನವದೆಹಲಿ: ಚಳಿಗಾಲದ ಅಧಿವೇಶನದ ವೇಳೆ ಸಂಸತ್ತಿನ ಉಭಯ ಸದನಗಳಿಂದ 146 ಸಂಸದರನ್ನು ಅಮಾನತುಗೊಳಿಸಲಾಗಿದೆ. ಇದು ಕೇಂದ್ರ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ