Breaking News

ಸಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ

Spread the love

ಬೆಂಗಳೂರು, ಆ.27- ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿರುವ ಸಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 530 ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ವೃತ್ತಿಪರ ಕೋರ್ಸ್‍ಗಳು ಬಯಸುವ ವಿದ್ಯಾರ್ಥಿಗಳಿಗಾಗಿ ನಡೆಯಲಿ ರುವ ಈ ಪರೀಕ್ಷೆಗೆ ಒಟ್ಟು 2,01,816 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ.

ನಾಳೆ ಜೀವಶಾಸ್ತ್ರ ಮತ್ತು ಗಣಿತ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಆಗಸ್ಟ್ 29ರಂದು ಭೌತಶಾಸ್ತ್ರ ಮತ್ತು ರಾಸಾಯನಶಾಸ್ತ್ರ ಪರೀಕ್ಷೆ ನಡೆಯಲಿದ್ದು, ಹೊರನಾಡು ಹಾಗೂ ಗಡಿಭಾಗದ ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆಯು ಆ.30ರಂದು ನಡೆಯಲಿದೆ. 530 ಪರೀಕ್ಷಾ ಕೇಂದ್ರಗಳ ಪೈಕಿ 86 ಕೇಂದ್ರಗಳು ರಾಜಧಾನಿ ಬೆಂಗಳೂರಿನಲ್ಲಿವೆ. ಉಳಿದ 444 ಕೇಂದ್ರಗಳು ಜಿಲ್ಲೆಗಳಲ್ಲಿವೆ. ಆಯಾ ಜಿಲ್ಲಾಧಿಕಾರಿಗಳು ತಮ್ಮ ಜಿಲ್ಲೆಯ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಹಾಯಕ ಆಯುಕ್ತರ ಮಟ್ಟದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಕ ಮಾಡಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.

ಪರೀಕ್ಷೆ ನಡೆಯುವ ದಿನಗಳಂದು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾ ಗಿದ್ದು, 530 ವೀಕ್ಷಕರು, 1060 ವಿಶೇಷ ಜಾಗೃತ ದಳದ ಸದಸ್ಯರು, 530 ಪ್ರಶ್ನೆಪತ್ರಿಕೆ ಪಾಲಕರು, 8409 ಕೊಠಡಿ ಮೇಲ್ವಿಚಾರಕರು ಹಾಗೂ 20,415 ಅಧಿಕಾರಿ ವರ್ಗದ ಸಿಬ್ಬಂದಿಯನ್ನು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾಗಿದೆ.

ಹೊರನಾಡು ಹಾಗೂ ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಪರೀಕ್ಷೆಯು ಆ.30ರಂದು ಆರು ಸ್ಥಳಗಳಲ್ಲಿ ನಡೆಯಲಿದೆ. ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ನಡೆಯುವ ಈ ಪರೀಕ್ಷೆಗೆ 1682 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ.


Spread the love

About Laxminews 24x7

Check Also

‘I Am god’ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ….ಯುವ ಪ್ರತಿಭೆ ರವಿ ಗೌಡ ಹೊಸ ಸಿನಿಮಾಗೆ ಸಾಥ್.

Spread the loveಬೆಂಗಳೂರು:ರಾಜಕೀಯ ಜಂಜಾಟಗಳ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುವು ಮಾಡಿಕೊಂಡು ಸಿನಿಮಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ. ಅಂತೆಯೆ ಅವರು ತಮ್ಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ