Breaking News
Home / ರಾಜಕೀಯ / ಅಧಿವೇಶನಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಿ, : ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

ಅಧಿವೇಶನಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಿ, : ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

Spread the love

ಮಂಗಳೂರು: ಸೆಪ್ಟೆಂಬರ್13 ರಿಂದ 24 ರವರೆಗೆ ವಿಧಾನಸಭಾ ಅಧಿವೇಶನ (Karnataka Assembly session 2021) ನಡೆಯಲಿದ್ದು, ಈ ಅಧಿವೇಶನದಲ್ಲಿ ಯಾರೂ ನನ್ನ ಬಳಿ ರಜೆ ಕೇಳುವ ಸ್ಥಿತಿ ಬರಬಾರದು. ಎಲ್ಲಾ ಶಾಸಕರು ಮತ್ತು ಸಚಿವರು ಕಡ್ಡಾಯವಾಗಿ ಪೂರ್ಣಪ್ರಮಾಣದಲ್ಲಿ ಅಧಿವೇಶನದಲ್ಲಿ ಹಾಜರಿರಬೇಕು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Speaker Vishweshwar Hegde Kageri) ಸೂಚನೆ ನೀಡಿದರು.

ಮಂಗಳೂರಿನಲ್ಲಿ ಈಕುರಿತು ಸುದ್ದಿಗೋಷ್ಠಿ ನಡೆಸಿದ ಅವರು, ಜನಪ್ರತಿನಿಧಿಗಳ ಸಂಪೂರ್ಣ ಹಾಜರಾತಿಯ ಅಗತ್ಯತೆ ವಿವರಿಸಿ ಮುಖ್ಯಮಂತ್ರಿಗಳಿಗೂ ಪತ್ರ ಬರೆದಿದ್ದೇನೆ. ಅಧಿವೇಶನದಲ್ಲಿ ಮಂಡಿಸಬೇಕಾದ ಬಿಲ್​ಗಳನ್ನು ಸಹ ಮೊದಲೇ ನನ್ನ ಗಮನಕ್ಕೆ ತರಲು ತಿಳಿಸಿದ್ದೇನೆ. ಎಲ್ಲ ಸಂಬಂಧಿಸಿದ ಅಧಿಕಾರಿಗಳು ಕೂಡ ಕಡ್ಡಾಯವಾಗಿ ಅಧಿವೇಶನದಲ್ಲಿ ಹಾಜರಿರಬೇಕು. ಶಾಸಕರು ಸಹ ಅಧಿವೇಶನವನ್ನ ಗಂಭೀರವಾಗಿ ತೆಗೆದುಕೊಂಡು ಹಾಜರಾಗಬೇಕು. ಜನರು ವ್ಯವಸ್ಥೆಯ ವಿರುದ್ಧ ಅನೇಕ ಬಾರಿ ಬೇಸತ್ತು ಹೋಗಿದ್ದಾರೆ. ಹೀಗಾಗಿ ಸದನದ ಹಾಜರಾತಿ, ಪಾಲ್ಗೊಳ್ಳುವಿಗೆ ಹಾಗೂ ಸದನದ ಶಿಸ್ತಿನ ಚೌಕಟ್ಟು ಮೀರದೆ ವರ್ತಿಸಬೇಕು. ಕರ್ನಾಟಕ ವಿಧಾನಸಭೆಯ ಮೌಲ್ಯತೆ ಕುಸಿಯದಂತೆ ವರ್ತಿಸಬೇಕು ಎಂದು ಅವರು ಮುಂಚಿತವಾಗಿ ಸೂಚನೆ ನೀಡಿದರು.

CET 2021: ಆಗಸ್ಟ್​ 27ರಿಂದ ಸಿಇಟಿ; ಪರೀಕ್ಷಾ ಕೇಂದ್ರಗಳಲ್ಲೇ ಪರೀಕ್ಷಾರ್ಥಿಗಳಿಗೆ ಮಾಸ್ಕ್ ವಿತರಣೆ: ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ಥ ನಾರಾಯಣ
ರಾಜ್ಯದಲ್ಲಿ ನಾಳೆಯಿಂದ (ಆಗಸ್ಟ್ 27) ಆಗಸ್ಟ್ 30ರವರೆಗೆ ಸಿಇಟಿ (Karnataka CET 2021) ನಡೆಯಲಿದ್ದು, 530 ಕೇಂದ್ರಗಳಲ್ಲೂ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಕೊವಿಡ್ ಸೋಂಕಿತರು, ಶಂಕಿತರಿಗೆ ಪ್ರತ್ಯೇಕ ಪರೀಕ್ಷೆ ನಡೆಸಲಾಗುತ್ತದೆ. ಅಗತ್ಯವುಳ್ಳವರಿಗಾಗಿ ಐಸೋಲೇಷನ್ ಸೆಂಟರ್​ಗಳಲ್ಲಿ ಪ್ರತ್ಯೇಕ ಪರೀಕ್ಷೆ ನಡೆಸುತ್ತೇವೆ. ಗಡಿ ಭಾಗದಲ್ಲಿ ಪರೀಕ್ಷೆ ನಡೆಸಲು ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಲು ಸೂಚನೆ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಮಾಸ್ಕ್​ಗಳನ್ನು ನೀಡಲಾಗುತ್ತದೆ. ಆನ್​ಲೈನ್​ನಲ್ಲಿಯೇ ದಾಖಲೆಗಳನ್ನು ಸಲ್ಲಿಸುವುದಕ್ಕೆ ಅವಕಾಶ ಒದಗಿಸಲಾಗಿದೆ. ಪರಿಶೀಲನೆ ಕೂಡ ಆನ್​ಲೈನ್​ ಮೂಲಕವೇ ನಡೆಯಲಿದೆ. ಬೆಂಗಳೂರು 10, ಶಿವಮೊಗ್ಗ 1, ಕೋಲಾರ 1 ಸೇರಿದಂತೆ ಒಟ್ಟು 12 ಸೋಂಕಿತ ವಿದ್ಯಾರ್ಥಿಗಳು ಸಿಇಟಿ ಬರೆಯಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.

ಈ ವರ್ಷ ಎಲ್ಲರೂ ಪಿಯು‌ಸಿ ಪಾಸ್ ಆಗಿರುವುದರಿಂದ ಪಿಯು ಅಂಕ ಪರಿಗಣಿಸದೇ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಿ ರ್ಯಾಂಕ್ ನೀಡುತ್ತೇವೆ ಎಂದು ಸಹ ಅವರು ಮಾಹಿತಿ ನೀಡಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ