Breaking News

ಮಾತೋಶ್ರೀ ಭೀಮಬಾಯಿ ಹಣಮಯ್ಯ ಗುತ್ತೇದಾರ ಸ್ಮಾರಕ ಪ್ರೌಢಶಾಲೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.91ರಷ್ಟು ಫಲಿತಾಂಶ

Spread the love

ಆಳಂದ: ಪಟ್ಟಣದ ಜೀವನ ಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ  ಅಡಿಯಲ್ಲಿ ನಡೆಯುತ್ತಿರುವ ಮಾತೋಶ್ರೀ ಭೀಮಬಾಯಿ ಹಣಮಯ್ಯ ಗುತ್ತೇದಾರ ಸ್ಮಾರಕ ಪ್ರೌಢಶಾಲೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.91ರಷ್ಟು ಫಲಿತಾಂಶ ದೊರಕಿದೆ.

ಪರೀಕ್ಷೆಗೆ ಕುಳಿತಿದ್ದ 88 ವಿದ್ಯಾರ್ಥಿಗಳಲ್ಲಿ 81 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು. 20 ವಿದ್ಯಾರ್ಥಿಗಳು ಡಿಸ್ಟಿಂಕ್ಷನನಲ್ಲಿ, 50 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಶಾಲೆಯ ಕು. ಪ್ರಿಯಾಂಕಾ ವಾಮನರಾವ 97.12% ಪಡೆಯುವುದರ ಮೂಲಕ ತಾಲೂಕಿಗೆ ತೃತೀಯ ಸ್ಥಾನ ಪಡೆದಿದ್ದಾಳೆ. ಶಾಲೆಯ ಕು. ಸೃಷ್ಟಿ ಧನರಾಜ ಶೇ 93.12%, ಕು. ಸುಜೀತ ಬನ್ಸಿಲಾಲ್  92%, ಕು. ಗೌಸಿಯಾ ಬೇಗಂ ಶೇ 90.40%, ಕು. ಮಹಾದೇವ ಎಸ್ ಶೇ.90%,  ಅಂಕಗಳನ್ನು ಪಡೆಯುವುದರ ಮೂಲಕ ಸಾಧನೆ ಮೆರೆದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಆಳಂದ ಶಾಸಕರಾದ ಸುಭಾಷ್ ಆರ್ ಗುತ್ತೇದಾರ, ಸಂಸ್ಥೆಯ ಕಾರ್ಯದರ್ಶಿ ಹಾಗೂ ಜಿ.ಪಂ ಸದಸ್ಯರಾದ ಹರ್ಷಾನಂದ ಎಸ್ ಗುತ್ತೇದಾರ ಮತ್ತು ಸಂಸ್ಥೆಯ ಆಡಳಿತಾಧಿಕಾರಿ ಡಾ. ರಾಘವೇಂದ್ರ ಚಿಂಚನಸೂರ, ಮುಖ್ಯ ಗುರು ಮಲ್ಲಿನಾಥ ತುಕ್ಕಾಣೆ ಸೇರಿದಂತೆ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ


Spread the love

About Laxminews 24x7

Check Also

ಗೌರಿ ಹುಣ್ಣಿಮೆಯಿಂದ ಛಟ್ಟಿ ಅಮವಾಸ್ಯೆವರೆಗೆ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಹುಬ್ಬಳ್ಳಿಯಿಂದ ವಿಶೇಷ ಬಸ್​ ವ್ಯವಸ್ಥೆ

Spread the love ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮದೇವಿ ದರ್ಶನ ತೆರಳುವ ಭಕ್ತಾದಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ