Breaking News

ಮೈಸೂರು ಅತ್ಯಾಚಾರ ಪ್ರಕರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ: ಸಿಎಂ ಬೊಮ್ಮಾಯಿ

Spread the love

ಹಾವೇರಿ: ಮೈಸೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರ ಯಾರೋ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ನಮ್ಮ ಪೊಲೀಸರು ದಕ್ಷರಿದ್ದಾರೆ. ಪ್ರಕರಣವನ್ನು ಬೇಧಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹಿರೇಕೆರೂರು ಪಟ್ಟಣ ಹೊರವಲಯದ ಬಸರೀಹಳ್ಳಿ ಹೆಲಿಪ್ಯಾಡ್ ನಲ್ಲಿ ಶನಿವಾರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಗಂಡಸರಿಗೂ ರಕ್ಷಣೆ ಇಲ್ಲ ಎಂಬ ಡಿ.ಕೆ ಶಿವಕುಮಾರ್ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು.

ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವಂತೆ ಹಿಂದೂ ಸಂಘಟನೆಗಳು ಒತ್ತಾಯಿಸಿದ ವಿಚಾರಕ್ಕೆ ಸಂಬಂಧಿಸಿದಂತೆ, ಗಣೇಶೋತ್ಸವ ಆಚರಣೆ ವಿಚಾರದಲ್ಲಿ ಭಿನ್ನಾಭಿಪ್ರಾಯಗಳೇನೂ ಇಲ್ಲ. ಎಲ್ಲರೂ ಅವರವರ ಅಭಿಪ್ರಾಯ ಹೇಳಿದ್ದಾರೆ. ಆ.30ರಂದು ತಜ್ಞರ ಸಭೆ ಇದೆ. ಸಭೆಯಲ್ಲಿ ಚರ್ಚಿಸಿ ಗಣೇಶೋತ್ಸವದ ಕುರಿತು ನಿರ್ಧಾರ ಮಾಡುತ್ತೇವೆ ಎಂದರು.


Spread the love

About Laxminews 24x7

Check Also

ಹೋಟೆಲ್‌ಗಳಿಗೆ 10 ದಿನ ಗ್ಯಾಸ್ ಸಮಸ್ಯೆ ಆಗುತ್ತೆ, ಸಹಿಸಿಕೊಳ್ಳಬೇಕು: ಮುನಿಯಪ್ಪ

Spread the loveಬೆಂಗಳೂರು: ಹೋಟೆಲ್‌ಗಳಿಗೆ ಕಮರ್ಷಿಯಲ್ ಗ್ಯಾಸ್ ಒಂದು ವಾರ, 10 ದಿನ ಸಮಸ್ಯೆ ಆಗಬಹುದು. ಅಲ್ಲಿವರೆಗೂ ಹೋಟೆಲ್‌ಗಳು ಸಹಿಸಿಕೊಳ್ಳಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ