ವಿಜಯಪುರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ಬಂಧನಕ್ಕೀಡಾಗಿದ್ದ ಆರೋಪಿಯೋರ್ವ ಇದೀಗ ಪೊಲೀಸ್ ಕಸ್ಟಡಿಯಲ್ಲಿರುವಾಗಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.
ಸಿಂದಗಿ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಶೌಚಾಲಯದಲ್ಲಿಯೇ ತನ್ನ ಪ್ಯಾಂಟ್ ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಪೋಷಕರ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿತ್ತು. ಇದೀಗ ಆರೋಪಿ ಮನ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
Laxmi News 24×7