Breaking News
Home / Uncategorized / 200 ರೂ. ಬಾಂಡ್ ಮೇಲೆ ಖರೀದಿ ಮಾಡಿ ನಿರ್ಮಿಸಿದ ಮನೆಗಳನ್ನು ಸಕ್ರಮಗೊಳಿಸುವುದು 20 ವರ್ಷಗಳ ಹಳೆಯ ಸಮಸ್ಯೆ: ಸತೀಶ ಜಾರಕಿಹೊಳಿ

200 ರೂ. ಬಾಂಡ್ ಮೇಲೆ ಖರೀದಿ ಮಾಡಿ ನಿರ್ಮಿಸಿದ ಮನೆಗಳನ್ನು ಸಕ್ರಮಗೊಳಿಸುವುದು 20 ವರ್ಷಗಳ ಹಳೆಯ ಸಮಸ್ಯೆ: ಸತೀಶ ಜಾರಕಿಹೊಳಿ

Spread the love

ಬೆಳಗಾವಿ: 200 ರೂ. ಬಾಂಡ್ ಮೇಲೆ ಖರೀದಿ ಮಾಡಿ ನಿರ್ಮಿಸಿದ ಮನೆಗಳನ್ನು ಸಕ್ರಮಗೊಳಿಸುವುದು 20 ವರ್ಷಗಳ ಹಳೆಯ ಸಮಸ್ಯೆಯಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯವರು ಅದನ್ನು ಈಗ ಮತ್ತೆ ಪ್ರಸ್ತಾಪಿಸುತ್ತಿದ್ದಾರೆ. ಇಷ್ಟು ದಿನ ಅವರು ಏನು ಮಾಡುತ್ತಿದ್ದರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ    ಪ್ರಶ್ನಿಸಿದರು.

ಇಲ್ಲಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಡ್ ಗಳ ಮೇಲೆ ನಿರ್ಮಿಸಿದ ಮನೆಗಳನ್ನು ಸಕ್ರಮಗೊಳಿಸವುದು ಹೇಳಿದಷ್ಟು ಸುಲಭವಲ್ಲ. ಮನೆಗಳ ಸಕ್ರಮವನ್ನು ಸರ್ಕಾರ ಅಧಿಕೃತವಾಗಿ ಘೋಷಿಸಬೇಕು. ಇದಕ್ಕೆ ವಿವಿಧ ಇಲಾಖೆಗಳ

ಚುನಾವಣೆ ಮುಗಿದ ಮೇಲೆ ಜನರು ಈ ಬಗ್ಗೆ ಯಾರನ್ನು ಕೇಳುವುದು? ಮುಖ್ಯಮಂತ್ರಿಗಳ ಮಟ್ಟದಲ್ಲಿ ಇದು ಚರ್ಚೆಯಾಗಬೇಕು. ಚುನಾವಣೆಗೂ ಮೊದಲೇ ರಾಜ್ಯ ಸರ್ಕಾರವೇ ಮನೆಗಳನ್ನು ಸಕ್ರಮಗೊಳಿಸುವ ಕುರಿತು ಅಧಿಕೃತವಾಗಿ ಘೋಷಿಸಲಿ ಎಂದು ಸತೀಶ ಸವಾಲು ಹಾಕಿದರು.

ಬೇರೆಯವರ ಯೋಜನೆಗಳ ಹೆಸರು ಬದಲಾಯಿಸುವುದೇ ಬಿಜೆಪಿಯವರ ಹವ್ಯಾಸ:

ಬೇರೆಯವರ ಯೋಜನೆಗಳ ಹೆಸರು ಬದಲಾಯಿಸುವುದೇ ಬಿಜೆಪಿಯವರ ಹವ್ಯಾಸ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವೂ ಯುಪಿಎ ಯೋಜನೆಗಳ ಹೆಸರನ್ನೇ ಬದಲಾಯಿಸಿ, ಅವುಗಳನ್ನೇ ಮುಂದುವರೆಸಿಕೊಂಡು ಬರುತ್ತಿದೆ ಎಂದು ಹೇಳಿದರು.

ಪಾಲಿಕೆ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ 24×7 ಕುಡಿಯುವ ನೀರಿನ ಯೋಜನೆ, ಕಸ ಸಂಗ್ರಹಣೆ ಸೇರಿ ಬಹುತೇಕ ಎಲ್ಲ ಹಳೆಯ ಯೋಜನೆಗಳೇ ಇವೆ. ಇವರು ಹೊಸದು ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

 


Spread the love

About Laxminews 24x7

Check Also

ಕರ್ನಾಟಕಕ್ಕೆ ಯೋಗಿ ಆದಿತ್ಯನಾಥ್ ಅವರಂತಹ ಸಿಎಂ ಬೇಕಿದೆ: ನೇಹಾ ಹಿರೇಮಠ್ ತಂದೆ ಹೇಳಿಕೆ

Spread the love ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಳೆದ ತಿಂಗಳು ನೇಹಾ ಪಾಟೀಲ್ ಕೊಲೆ ಕೇಸ್ ಮಾಸುವ ಮುನ್ನವೇ ಅದೇ ಮಾದರಿಯಲ್ಲಿ ಹುಬ್ಬಳ್ಳಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ