Home / ಜಿಲ್ಲೆ / ಬೆಂಗಳೂರು / ಸಾರ್ವಜನಿಕ ಗಣೇಶೋತ್ಸವದ ಕುರಿತಂತೆ ಇಂದು ರಾಜ್ಯ ಸರ್ಕಾರ ನಿರ್ಧರಿಸುವ ಸಾಧ್ಯತೆ

ಸಾರ್ವಜನಿಕ ಗಣೇಶೋತ್ಸವದ ಕುರಿತಂತೆ ಇಂದು ರಾಜ್ಯ ಸರ್ಕಾರ ನಿರ್ಧರಿಸುವ ಸಾಧ್ಯತೆ

Spread the love

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ವೈರಸ್ 3 ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವದ ಕುರಿತಂತೆ ಇಂದು ರಾಜ್ಯ ಸರ್ಕಾರ ನಿರ್ಧರಿಸುವ ಸಾಧ್ಯತೆ ಇದೆ.

 

ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಭೀತಿ ಬೇರೆ ಎದುರಾಗಿದೆ. ಸಾಮೂಹಿಕ ಗಣೇಶ ಆಚರಣೆ ಬಗ್ಗೆ ಸರ್ಕಾರ ನಿರ್ಧಾರಕ್ಕೆ ಬಂದಿಲ್ಲ. ಹೀಗಾಗಿ ರಾಜ್ಯದ ಜನ ಸಾಮೂಹಿಕವಾಗಿ ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರದಿಂದ ಅನುಮತಿ ಇದೆಯಾ? ಇಲ್ಲವಾ ಎನ್ನುವ ಗೊಂದಲದಲ್ಲಿದ್ದಾರೆ. ಹೀಗಾಗಿ ಇಂದು ಗಣೇಶೋತ್ಸವ ಆಚರಣೆಗೆ ಕೆಲ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುವ ಸಾಧ್ಯತೆಯೂ ಇದೆ.

ಸಾಮೂಹಿಕ ಗಣೇಶ ಆಚರಣೆ ವಿಚಾರವಾಗಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ಕರೆದಿದ್ದಾರೆ.ಇಂದು ಸಂಜೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ 4 ಗಂಟೆಗೆ ಸಭೆ ನಡೆಯಲಿದ್ದು, ಸಿಎಂ, ತಾಂತ್ರಿಕ ಸಲಹಾ ಸಮಿತಿ ಜೊತೆ ಚರ್ಚೆ ನಡೆಸಲಿದ್ದಾರೆ. ಸಭೆಯಲ್ಲಿ ಆರೋಗ್ಯ ಸಚಿವರು, ಬಿಬಿಎಂಪಿ ಆಯುಕ್ತರು ಹಾಗೂ ಪೊಲೀಸ್ ಆಯುಕ್ತರು ಕೂಡ ಭಾಗಿಯಾಗಲಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ