Breaking News

ನಾಪತ್ತೆಯಾಗ್ತಿದ್ದಾರೆ ಸರ್ಕಾರಿ ಇಲಾಖೆ ಸಿಬ್ಬಂದಿ! ಪೊಲೀಸರಿಂದ ತನಿಖೆಗೆ ವಿಶೇಷ ತಂಡ ರಚನೆ.

Spread the love

ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ಕೆಲ ದಿನಗಳ ಹಿಂದೆ ಸಹಾಯಕ ಆಯುಕ್ತರ ಕಚೇರಿ ಸಿಬ್ಬಂದಿ ಏಕಾಏಕಿ ನಾಪತ್ತೆಯಾಗಿದ್ದು ಭಾರಿ ಕೋಲಾಹಲ ಸೃಷ್ಟಿಸಿದೆ. ಇದರ ಕಾರಣ ಹುಡುಕುವ ಮುನ್ನವೇ ಇದೀಗ ಭೂ ದಾಖಲೆಗಳ ಉಪನಿರ್ದೇಶಕರ ಕಚೇರಿಯ ಸಿಬ್ಬಂದಿ ಕೂಡ ನಾಪತ್ತೆಯಾಗಿದ್ದಾರೆ! ಈ ಹಿಂದೆ ನಾಪತ್ತೆಯಾಗಿದ್ದ ಪ್ರಕಾಶ್‌ಬಾಬು ಅವರ ಪ್ರಕರಣ ಪಶ್ಚಿಮ ಠಾಣೆಯಲ್ಲಿ ದಾಖಲೆಯಾಗಿದ್ದರೆ, ಈಗ ಶಿವಪ್ಪ ಅವರು ನಾಪತ್ತೆಯಾಗಿದ್ದು, ಅವರ ಪತ್ನಿ ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಸಿದ್ದಾರೆ. ಸರ್ಕಾರಿ ಇಲಾಖೆಯ ಸಿಬ್ಬಂದಿ ಹೀಗೆ ದಿಢೀರ್‌ ಕಣ್ಮರೆಯಾಗುತ್ತಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ಪೊಲೀಸರಿಗೆ ಇದರಲ್ಲಿ ಭ್ರಷ್ಟಾಚಾರದ ವಾಸನೆ ಬಡಿಯುತ್ತಿದೆ ಎನ್ನಲಾಗಿದೆ.

ಪ್ರಕರಣಗಳ ತನಿಖೆಗೆ ಇದಾಗಲೇ ಪೊಲೀಸ್ ಇಲಾಖೆ ತಂಡಗಳನ್ನ ರಚನೆ ಮಾಡಿದ್ದು, ತನಿಖೆ ಚುರುಕುಕೊಂಡಿದೆ. ಆದರೆ ಜನರು ಮಾತ್ರ ಇದರಿಂದ ಭಾರಿ ಆತಂಕಗೊಂಡಿದ್ದು, ಇದು ಭಾರಿ ಚರ್ಚೆಗೆ ಗ್ರಾಸವಾಗಿದೆ.

ಲೆಕ್ಕಪತ್ರ ಪರಿಶೋಧನೆಗಾಗಿ ಆಡಿಟ್ ಟೀಮ್ ಜಿಲ್ಲೆಗೆ ಬರುವುದಕ್ಕೂ ಮುಂಚೆಯೇ ರಾಯಚೂರಿನಲ್ಲಿ ಸರ್ಕಾರಿ ಇಲಾಖೆಯ ಇಬ್ಬರು ಸಿಬ್ಬಂದಿ ನಾಪತ್ತೆಯಾಗಿರುವುದು ಏಕೆ? ಆಡಿಟ್‌ಗೂ ಈ ನಾಪತ್ತೆಗೂ ಸಂಬಂಧವಿದೆಯೇ ಎಂಬ ಎಲ್ಲಾ ಆಯಾಮಗಳಿಂದ ‍ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ