Breaking News

ಭ್ರಷ್ಟಾಚಾರದಲ್ಲಿ ರಾಜ್ಯ ಸರಕಾರ ನಂ.1: ಡಿ.ಕೆ.ಶಿವಕುಮಾರ್‌

Spread the love

ಹುಬ್ಬಳ್ಳಿ: ಕೋವಿಡ್‌ ಸಂದರ್ಭದ ಭ್ರಷ್ಟಾಚಾರದಲ್ಲಿ ರಾಜ್ಯ ಸರಕಾರ ರಾಷ್ಟ್ರದಲ್ಲೇ ಮೊದಲ ಸ್ಥಾನದಲ್ಲಿದೆ. ಚಿಕಿತ್ಸೆ, ಔಷಧ, ಶವಸಂಸ್ಕಾರಕ್ಕೂ ಕ್ಯೂ ನಿಲ್ಲಿಸಿದರು. ಸಂಕಷ್ಟದ ಸಂದರ್ಭದಲ್ಲಿ ಆಸ್ತಿ ತೆರಿಗೆ ಸೇರಿ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿ ಜನರನ್ನು ಕಿತ್ತು ತಿನ್ನುವ ಕೆಲಸವನ್ನು ಸರಕಾರ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಉತ್ತಮ ಆಡಳಿತವಿದ್ದರೆ ಎರಡೇ ವರ್ಷಕ್ಕೆ ಮುಖ್ಯಮಂತ್ರಿಯನ್ನು ಬದಲಾಯಿಸಿದ್ದು ಯಾಕೆ? ರಾಜೀನಾಮೆ ನೀಡುವ ಮೊದಲು ಮುಖ್ಯಮಂತ್ರಿಗಳು ಬಹಿರಂಗವಾಗಿ ಅತ್ತಿದ್ದು ಯಾಕೆ ಎನ್ನುವುದನ್ನು ಪಕ್ಷದ ನಾಯಕರು ಜನರಿಗೆ ತಿಳಿಸಬೇಕು. ಸಿಎಂ ಬದಲಾವಣೆ ಪಕ್ಷದ ಆಂತರಿಕ ವಿಚಾರವಾದರೂ ಕೋವಿಡ್‌ ಸಂದರ್ಭದಲ್ಲಿ ನಡೆದ ಭ್ರಷ್ಟಾಚಾರಕ್ಕೂ ರಾಜೀನಾಮೆ ಪಡೆದಿರುವುದಕ್ಕೂ ಏನಾದರೂ ಸಂಬಂಧಿವಿದೆಯೇ ಎಂದು ರಾಜ್ಯದ ಜನರು ಪ್ರಶ್ನಿಸುತ್ತಿದ್ದಾರೆ ಎಂದರು.


Spread the love

About Laxminews 24x7

Check Also

ಆಟೊ ಬುಕ್ ಮಾಡಿ ಬಳಿಕ ರದ್ದು ಮಾಡಿದಕ್ಕೆ ಯುವತಿ ಹಿಂಬಾಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಚಾಲಕ: ಬಂಧನ

Spread the love ಬೆಂಗಳೂರು: ಆ್ಯಪ್​ನಲ್ಲಿ ಆಟೋ ಬುಕ್ ಮಾಡಿ ಬಳಿಕ ರದ್ದು ಮಾಡಿದ್ದಕ್ಕೆ ಅಸಮಾಧಾನಗೊಂಡು ಯುವತಿಯನ್ನ ಹಿಂಬಾಲಿಸಿ ಅವಾಚ್ಯ ಶಬ್ಧಗಳಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ