Breaking News
Home / ಜಿಲ್ಲೆ / ಬೆಂಗಳೂರು / ಸರಳ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ಸಾದ್ಯತೆ

ಸರಳ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ಸಾದ್ಯತೆ

Spread the love

ಬೆಂಗಳೂರು, ;ಸಾರ್ವಜನಿಕರು ಹಾಗೂ ಹಿಂದೂಪರ ಸಂಘಟನೆಗಳು ಮತ್ತು ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ಗಣೇಶ ಹಬ್ಬ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡುವ ನಿರೀಕ್ಷೆಯಿದೆ. ಈ ಬಾರಿಯ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ನಿರ್ಬಂಧ ಹಾಕಿ ಸರಳವಾಗಿ ಆಚರಿಸುವಂತೆ ಅಧಿಸೂಚನೆ ಹೊರಡಿಸಿತ್ತು. ಇದಕ್ಕೆ ಕೆಲವು ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು.

ಅದರಲ್ಲೂ ಆಡಳಿತಾರೂಢ ಬಿಜೆಪಿಯ ಸಚಿವರು ಮತ್ತು ಶಾಸಕರೇ ಸರ್ಕಾರದ ನಿರ್ಧಾರಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ಗಣಪತಿ ಹಬ್ಬ ಆಚರಣೆಗೆ ಅನುಮತಿ ನೀಡಬೇಕೆಂದು ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಈ ಹಿನ್ನೆಲೆಯಲ್ಲ ಇಂದು ನಡೆಯುವ ಸಭೆಯಲ್ಲಿ ಗಣೇಶ ಹಬ್ಬ ಆಚರಣೆಗೆ ಕೆಲವು ಷರತ್ತುಬದ್ದ ಅನುಮತಿ ನೀಡುವ ಸಂಭವವೂ ಇದೆ.

ಒಂದು ವೇಳೆ ಆಚರಣೆಗೆ ಅನುಮತಿ ಕೊಡದಿದ್ದರೆ ಹಿಂದೂಪರ ಸಂಘಟನೆಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ ಎಂಬ ಆತಂಕ ಇರುವುದರಿಂದ ಸರ್ಕಾರ ನಿಯಮಗಳನ್ನು ವಿಧಿಸಿ ಆಚರಣೆಗೆ ಅನುಮತಿ ನೀಡಬಹುದು ಎನ್ನಲಾಗುತ್ತಿದೆ.ಇದೇ ಸಂದರ್ಭದಲ್ಲಿ ಆರನೇ ತರಗತಿಯಿಂದ 8ನೇ ತರಗತಿಗಳ ಪುನರಾರಂಭ, ಗಣೇಶ ಚತುರ್ಥಿ ಆಚರಣೆ, ಗಡಿ ಜಿಲ್ಲೆಗಳಲ್ಲಿ ಬಿಗಿಭದ್ರತೆ ಸೇರಿದಂತೆ ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ. ಶಾಲೆ ಆರಂಭದ ಕುರಿತಂತೆ ತಾಂತ್ರಿಕ ಸಲಹಾ ಸಮಿತಿ ತಜ್ಞರ ಜೊತೆಗೆ ನಡೆಯುತ್ತಿರುವ ಈ ಮಹತ್ವದ ಸಭೆಯಲ್ಲಿ ರಾಜ್ಯದಲ್ಲಿ 6ರಿಂದ 8 ನೇ ತರಗತಿ ಶಾಲೆ ಆರಂಭದ ಕುರಿತಂತೆ ನಿರ್ಧಾರವಾಗಲಿದೆ.

ಒಂದು ವೇಳೆ ತಾಂತ್ರಿಕ ಸಲಹಾ ಸಮಿತಿ ತಜ್ಞರು ರಾಜ್ಯದಲ್ಲಿ 6 ರಿಂದ 8 ನೇ ತರಗತಿ ಆರಂಭದ ಕುರಿತು ಗ್ರೀನ್ ಸಿಗ್ನಲ್ ನೀಡಿದರೆ ಶಾಲೆ ಆರಂಭಕ್ಕೆ ಇಂದೇ ಮುಹೂರ್ತ ಫಿಕ್ಸ್ ಆಗಲಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿಯೇ ಶಾಲೆ ಆರಂಭವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ 6 ರಿಂದ 8 ನೇ ತರಗತಿ ಆರಂಭಕ್ಕೆ ಶಿಕ್ಷಣ ಇಲಾಖೆ ಮುಂದಾಗಿದ್ದು, ಶೇ. 2 ಕ್ಕಿಂತ ಕಡಿಮೆ ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ಶಾಲೆ ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎನ್ನಲಾಗುತ್ತಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ