Breaking News

ಲಾರಿ ದುರಸ್ತಿ ಮಾಡುವ ವೇಳೆ ಪಿಕಪ್ ಹರಿದು ಮೂವರು ಸಾವು

Spread the love

ಮಂಗಳೂರು: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಲಾರಿ ರಿಪೇರಿ ಮಾಡುತ್ತಿದ್ದ ವೇಳೆ ಪಿಕಪ್ ವಾಹನ ಹರಿದು ಮೂವರು ಮೃತಪಟ್ಟಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿ ಸೋಮವಾರ ನಡೆದಿದೆ.

ಬೆಂಗಳೂರಿನ ಅಬ್ದುಲ್ ರಹಿಮಾನ್ (23), ಮಧು (33) ಮತ್ತು ಅಬ್ಸಾನ್ (33) ಮೃತರು. ಲಾರಿಯ ಚಾಲಕ ಶಿವಮೊಗ್ಗದ ಆಸಿಫ್ ಲಾರಿಯ ಒಳಗಡೆ ಕುಳಿತಿದ್ದರಿಂದ ಪಾರಾಗಿದ್ದಾರೆ.

ಆಂಧ್ರಪ್ರದೇಶ ಮೂಲದ ಲಾರಿಯೊಂದು ಹೆದ್ದಾರಿಯಲ್ಲಿ ಕೆಟ್ಟು ನಿಂತಿತ್ತು. ಲಾರಿ ರಿಪೇರಿ ಮಾಡುವಾಗ ಆಂಧ್ರಪ್ರದೇಶದಿಂದ ಬಂದ ಇಬ್ಬರು ಮೆಕ್ಯಾನಿಕ್‌ಗಳ ಮೇಲೆ ಪಿಕಪ್ ವಾಹನ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಆಗಮಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ