Breaking News
Home / ಜಿಲ್ಲೆ / ಬೆಂಗಳೂರು / ಕೆ.ಎಸ್.ಈಶ್ವರಪ್ಪ ನಾಲಿಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ: ಸಿದ್ದರಾಮಯ್ಯ

ಕೆ.ಎಸ್.ಈಶ್ವರಪ್ಪ ನಾಲಿಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ: ಸಿದ್ದರಾಮಯ್ಯ

Spread the love

ಬೆಂಗಳೂರು: ಕಾಂಗ್ರೆಸ್ ಫ್ಯೂಸ್ ಹೋಗಿದೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ(KS Eshwarappa) ಅವರ ನಾಲಿಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ವ್ಯಂಗ್ಯವಾಡಿದ್ದಾರೆ. ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಕೆ.ಎಸ್.ಈಶ್ವರಪ್ಪ ಎಷ್ಟೇ ಕೂಗಾಡಲಿ, ಹಾರಾಡಲಿ ಮುಂಬರುವ ಚುನಾವಣೆಯಲ್ಲಿ ನಾಡಿನ ಜನ ಯಾರ ಫ್ಯೂಸ್ ಕಿತ್ತಾಕುತ್ತಾರೆ ಎನ್ನುವುದು ಗೊತ್ತಾಗುತ್ತದೆ’ ಅಂತಾ ಕುಟುಕಿದ್ದಾರೆ.

‘ಕೊರೊನಾ ರೋಗದ ಬಗ್ಗೆ ಹೆಚ್ಚು ಎಚ್ಚರಿಕೆಯಿಂದಿರಬೇಕಾದ ಆಡಳಿತಾರೂಢ ಪಕ್ಷವೇ ಜನಾಶೀರ್ವಾದ ಯಾತ್ರೆ ಹೊರಟಿರುವುದು ಖಂಡನೀಯ. ಎಲ್ಲಾಕಡೆ ಕೇಂದ್ರ ಮತ್ತು ರಾಜ್ಯದ ಸಚಿವರು ಮುಂದೆ ನಿಂತು ಕೋವಿಡ್(COVID-19) ನಿಯಮಗಳನ್ನು ಉಲ್ಲಂಘಿಸಿದರೆ ಸಾರ್ವಜನಿಕರಿಗೆ ಏನು ಸಂದೇಶ ನೀಡಿದಂತಾಗುತ್ತದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಗಣೇಶ ಹಬ್ಬ ಆಚರಿಸಬಹುದು. ಸಾರ್ವಜನಿಕರೂ ಗುಂಪು ಸೇರುವಾಗ ಎಚ್ಚರಿಕೆಯಿಂದ ಇರಬೇಕು. ಅತಿಹೆಚ್ಚು ಜನ ಗುಂಪು ಸೇರದಂತೆ, ಸಾರ್ವಜನಿಕವಾಗಿ ಗುಂಪು ಗುಂಪಾಗಿ ಆಚರಣೆ ಮಾಡದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು’ ಎಂದು ಸಿದ್ದರಾಮಯ್ಯ(Siddaramaiah) ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಫ್ಯೂಸ್ ಹೋಗಿದೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರ ನಾಲಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ.
ಅವರು ಎಷ್ಟೇ ಕೂಗಾಡಲಿ,ಹಾರಾಡಲಿ,ಚುನಾವಣೆಯಲ್ಲಿ ನಾಡಿನ ಜನ ಯಾರ ಫ್ಯೂಸ್ ಕಿತ್ತಾಕುತ್ತಾರೆ ಎನ್ನುವುದು ಗೊತ್ತಾಗುತ್ತದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ