Breaking News
Home / Uncategorized / ಮಹಾನಗರ ಪಾಲಿಕೆ, ಸ್ಥಳೀಯ ಸಂಸ್ಥೆ ಚುನಾವಣೆ; ಎಲ್ಲೆಲ್ಲಿ ರಜೆ?

ಮಹಾನಗರ ಪಾಲಿಕೆ, ಸ್ಥಳೀಯ ಸಂಸ್ಥೆ ಚುನಾವಣೆ; ಎಲ್ಲೆಲ್ಲಿ ರಜೆ?

Spread the love

ಬೆಂಗಳೂರು, ಆಗಸ್ಟ್ 31; ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆ ಹಾಗೂ ಪಟ್ಟಣ ಪಂಚಾಯಿತಿಗಳ ಚುನಾವಣೆ ಘೋಷಣೆ ಮಾಡಿದೆ. ಸೆಪ್ಟೆಂಬರ್ 3ರ ಶುಕ್ರವಾರ ಮತದಾನ ನಡೆಯಲಿದೆ.

ಮತದಾನ ನಡೆಯುವ ಪ್ರದೇಶಗಳಲ್ಲಿ ಮತದಾನ ಮಾಡಲು ಅನುಕೂಲವಾಗುವಂತೆ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಸೆಪ್ಟೆಂಬರ್ 3ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.

 

ಚುನಾವಣೆ ನಡೆಯುವ ವಾರ್ಡ್‌ನ ವ್ಯಾಪ್ತಿಯಲ್ಲಿರುವ ಎಲ್ಲಾ ಸಾರ್ವಜನಿಕ ಉದ್ದಿಮೆಗಳು, ವ್ಯವಹಾರಿಕ ಸಂಸ್ಥೆಗಳು, ಖಾಸಗಿ ಕಂಪನಿಗಳು ಮತ್ತು ಇತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಲು ಸೂಚನೆ ನೀಡಲಾಗಿದೆ.

 

ಚುನಾವಣೆ ನಡೆಯುವ ವಾರ್ಡ್‌ಗಳ ವ್ಯಾಪ್ತಿಯ ಹೊರಗಡೆ ಕೆಲಸ ನಿರ್ವಹಣೆ ಮಾಡುತ್ತಿದ್ದು, ಆದರೆ ಚುನಾವಣೆ ನಡೆಯುವ ವಾರ್ಡ್‌ನ ವ್ಯಾಪ್ತಿಯಲ್ಲಿ ನೋಂದಾಯಿತ ಮತದಾರರಾಗಿರುವವರಿಗೆ ಮತದಾನ ಮಾಡಲು ಅನುಕೂಲವಾಗುವಂತೆ 3/9/2021ರಂದು ಪ್ರಜಾಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 135-ಬಿ ಅಡಿಯಲ್ಲಿ ವೇತನ ಸಹಿತ ರಜೆ ನೀಡಲು ಆದೇಶಿಸಲಾಗಿದೆ.

ಆದರೆ ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ಅಧಿಕಾರಿಗಳಿಗೆ ಅನ್ವಯವಾಗುವುದಿಲ್ಲ. ಆದಾಗ್ಯೂ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡತಕ್ಕದ್ದು. ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗತಕ್ಕದ್ದು.

ಚುನಾವಣೆ/ ಉಪ ಚುನಾವಣೆ ನಡೆಯುವ ಮಹಾನಗರ ಪಾಲಿಕೆ, ಸ್ಥಳೀಯ ಸಂಸ್ಥೆ ಮತ್ತು ಪಟ್ಟಣ ಪಂಚಾಯಿತಿಗಳ ಪಟ್ಟಿ ಕೆಳಗಿನಂತಿದೆ.

ಮಹಾನಗರ ಪಾಲಿಕೆಗಳು ಬೆಳಗಾವಿ (58 ವಾರ್ಡ್), ಹುಬ್ಬಳ್ಳಿ-ಧಾರವಾಡ (82 ವಾರ್ಡ್) ಮತ್ತು ಕಲಬುರಗಿ (55 ವಾರ್ಡ್).

ನಗರ ಸ್ಥಳೀಯ ಸಂಸ್ಥೆಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರ ಸಭೆ (1 ರಿಂದ 31ನೇ ವಾರ್ಡ್). ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪುರಸಭೆ (1 ರಿಂದ 23ನೇ ವಾರ್ಡ್).

ಬೀದರ್ ಜಿಲ್ಲೆಯ ಬೀದರ್ ನಗರ ಸಭೆ (26 ಮತ್ತು 32ನೇ ವಾರ್ಡ್). ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರಸಭೆ (29ನೇ ವಾರ್ಡ್).

ಮಹಾನಗರ ಪಾಲಿಕೆ ಉಪ ಚುನಾವಣೆ ಮೈಸೂರು ಮಹಾನಗರ ಪಾಲಿಕೆಯ 36ನೇ ವಾರ್ಡ್‌ ಉಪ ಚುನಾವಣೆ ಸಹ ಸೆಪ್ಟೆಂಬರ್ 3ರ ಶುಕ್ರವಾರ ನಡೆಯಲಿದೆ.

ನಗರ ಸ್ಥಳೀಯ ಸಂಸ್ಥೆ ಉಪ ಚುನಾವಣೆ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರ ಸಭೆ (18), ಬೀಳಗಿ ಪಟ್ಟಣ ಪಂಚಾಯಿತಿ (14), ಮಹಾಲಿಂಗಪೂರ ಪುರಸಭೆ (3), ತೇರದಾಳ ಪುರಸಭೆ (3).

ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣ ಪಂಚಾಯಿತಿ (13), ಸೋಮವಾರಪೇಟೆ ಪಟ್ಟಣ ಪಂಚಾಯಿತಿ (1), ಸೋಮವಾರಪೇಟೆ ಪಟ್ಟಣ ಪಂಚಾಯಿತಿ (3). ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರಸಭೆ (11). ಕಲಬುರಗಿಯ ವಾಡಿ ಪುರಸಭೆ (4), ವಾಡಿ ಪುರಸಭೆ (23).

ಬೀದರ್ ಜಿಲ್ಲೆಯ ಬಸವ ಕಲ್ಯಾಣ ನಗರಸಭೆ (11), ಬಸವ ಕಲ್ಯಾಣ ನಗರ ಸಭೆ (23). ಕೋಲಾರ ಜಿಲ್ಲೆಯ ಕೆಜಿಎಫ್ ನಗರಸಭೆ (12), ದಾವಣಗೆರೆ ಜಿಲ್ಲೆಯ ಹರಿಹರ ನಗರ ಸಭೆ (14), ಬೆಳಗಾವಿ ಜಿಲ್ಲೆಯ ರಾಯಭಾಗ್ ಪಟ್ಟಣ ಪಂಚಾಯಿತಿ (9).

ಕೊಪ್ಪಳ ಜಿಲ್ಲೆಯ ಸವದತ್ತಿ ಪುರಸಭೆ (23), ಕುಷ್ಟಗಿ ಪುರಸಭೆ (16). ಗದಗ ಜಿಲ್ಲೆಯ ಮುಳುಗುಂದ ಪಟ್ಟಣ ಪಂಚಾಯಿತಿ (18), ರಾಮನಗರ ಜಿಲ್ಲೆಯ ರಾಮನಗರ ನಗರಸಭೆ (4), ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪುರಸಭೆ (21).


Spread the love

About Laxminews 24x7

Check Also

ಬೈಲಹೊಂಗಲ :ನರೇಗಾ ಕೆಲಸಕ್ಕೆ ಹೆಚ್ಚಿನ ಜನರು ಬರುವಂತೆ ಕರೆ- ವಿಜಯ ಪಾಟೀಲ.

Spread the loveಗ್ರಾಪಂ ಸುತಗಟ್ಟಿ ಮತ್ತು ದೇಶನೂರ ವ್ಯಾಪ್ತಿಯ ನರೇಗಾ ಕಾಮಗಾರಿ ಸ್ಥಳಗಳಿಗೆ ಇಂದು ಸಹಾಯಕ ನಿರ್ದೇಶಕ ವಿಜಯ ಪಾಟೀಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ