Breaking News

ಪಿಡಿಒನನ್ನು ಹೊರದಬ್ಬಿ ಪಂಚಾಯಿತಿ ಕಚೇರಿಗೆ ಬೀಗ ಜಡಿದ ಗ್ರಾಪಂ ಸದಸ್ಯರು!

Spread the love

ಚಿಕ್ಕಬಳ್ಳಾಪುರ: ಪಿಡಿಒ ಅವರನ್ನು ಹೊರಗೆ ಹಾಕಿ ಗ್ರಾಮ ಪಂಚಾಯಿತಿ ಕಚೇರಿಗೆ ಸದಸ್ಯರು ಬೀಗ ಜಡಿದ ಘಟನೆ ಗುಡಿಬಂಡೆ ತಾಲೂಕು ವರ್ಲಕೊಂಡ ಗ್ರಾಮದಲ್ಲಿ ಸಂಭವಿಸಿದೆ.
ಪಂಚಾಯಿತಿ ಕಾರ್ಯಾಲಯಕ್ಕೆ ಪಿಡಿಒ ಶ್ರೀನಿವಾಸ್​ ಸರಿಯಾಗಿ‌ ಬರುತ್ತಿಲ್ಲ, ಅಭಿವೃದ್ಧಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಗ್ರಾಪಂ ಸದಸ್ಯರು ಅಧ್ಯಕ್ಷೆ ಆನಂದಮ್ಮ ನಾರಾಯಣಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಪಿಡಿಒ ಶ್ರೀನಿವಾಸ್ ಅವರನ್ನ ವರ್ಗಾವಣೆ ಮಾಡುವಂತೆ ಜಿಪಂ ಸಿಇಒ ಸೇರಿದಂತೆ ಮೇಲಧಿಕಾರಿಗಳಿಗೆ ಜನಪತ್ರಿನಿಧಿಗಳು ದೂರು‌ ನೀಡಿದ್ದರು. ಆದರೂ ಗ್ರಾಮಗಳ ಅಭಿವೃದ್ಧಿಗೆ ಪಿಡಿಒ ಸಹಕರಿಸದೆ, ಸಾರ್ವಜನಿಕರ ಹಣ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಸದಸ್ಯರು ಗಂಭೀರ ಆರೋಪ ಮಾಡಿದ್ದಾರೆ.

 

ಇಂದು‌ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಕರೊನಾ ಲಸಿಕೆ ಅಭಿಯಾನ ನಡೆಯುತ್ತಿದ್ದು, ಈ ನಡುವೆ ಪಿಡಿಒ- ಜನಪ್ರತಿನಿಧಿಗಳ ನಡುವೆ ವೈಮನಸ್ಸು ಉಂಟಾಗಿ ಪಂಚಾಯಿತಿ ವ್ಯಾಪ್ತಿಯ ಜನ ಹೈರಾಣಾಗಿದ್ದಾರೆ.


Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ