Breaking News

ರಾಜ್ಯದ ಜನತೆಗೆ ನಾನು ಮುಖ್ಯಮಂತ್ರಿ, ಕ್ಷೇತ್ರದ ಒಳಗಡೆ ಬಸವರಾಜ ಬೊಮ್ಮಾಯಿ ಮಾತ್ರ

Spread the love

ಹಾವೇರಿ: ರಾಜ್ಯದ ಜನತೆಗೆ ನಾನು ಮುಖ್ಯಮಂತ್ರಿ, ಕ್ಷೇತ್ರದ ಒಳಗಡೆ ಬಸವರಾಜ ಬೊಮ್ಮಾಯಿ ಮಾತ್ರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾವೇರಿಯ ಜನತೆಯಲ್ಲಿ ಹೇಳಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು ನಮ್ಮ ಸಚಿವ ಸಂಪುಟದಲ್ಲಿರುವ ಸಚಿವರು ಪ್ರತಿಭಾವಂತರಿದ್ದಾರೆ. ಕಾರ್ಯಕ್ಷಮತೆಯಿಂದ ಕೆಲಸ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಹೀಗಾಗಿ ರಾಜ್ಯದ ಜನತೆಗೆ ಉತ್ತಮ ಕಾರ್ಯಕ್ರಮಗಳನ್ನು ಕೊಡಲು ಸಾಧ್ಯವಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ತಡಸ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸುವುದಕ್ಕೂ ಮುನ್ನ ಅವರು ತಡಸ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದರು.

ತಡಸ ಗ್ರಾಮ ಮುಂದಿನ ದಿನಗಳಲ್ಲಿ ಪಟ್ಟಣ, ನಗರವಾಗಿ ಪರಿವರ್ತನೆಯಾಗಲಿದೆ. ಗ್ರಾಮಕ್ಕೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು. ಈಗಾಗಲೇ ಗ್ರಾಮದಲ್ಲಿ ಪದವಿಪೂರ್ವ ಕಾಲೇಜು ಇದೆ. ಮುಂದೆ ಇಲ್ಲಿ ಪದವಿ ಕಾಲೇಜು ಸ್ಥಾಪಿಸಲಾಗುವುದು. ಹೆಣ್ಣು ಮಕ್ಕಳಿಗಾಗಿ ವಿಶೇಷ ಹೈಸ್ಕೂಲನ್ನು ತೆರೆಯಲಾಗುವುದು. ಗ್ರಾಮದ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ತಾಂತ್ರಿಕ ಶಿಕ್ಷಣ ನೀಡುವ ಶಾಲೆಯನ್ನು ಆರಂಭಿಸಲು ಉದ್ದೇಶಿಸಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ